ಗುರುವಾರ , ಅಕ್ಟೋಬರ್ 29, 2020
28 °C

ಇಟಲಿ: ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತನೆ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ರೋಮ್‌: ದೇಶದಲ್ಲಿ ಕೊರೊನಾ ವೈರಸ್ ಸೋಂಕು‌ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸು ಧರಿಸುವುದನ್ನು ಇಟಲಿ ಸರ್ಕಾರವು ಕಡ್ಡಾಯಗೊಳಿಸಲು ಮುಂದಾಗಿದೆ ಎಂದು  ಆರೋಗ್ಯ ಸಚಿವ ರಾಬರ್ಟೊ ಸ್ಪೆರಾನ್ಜಾ ಮಂಗಳವಾರ ತಿಳಿಸಿದರು.

‘ದೇಶದಾದ್ಯಂತ ಮಾಸ್ಕ್‌ ಧರಿಸುವಿಕೆಯನ್ನು ಕಡ್ಡಾಯ ಮಾಡಲು ಸಿದ್ಧತೆ ನಡೆಯುತ್ತಿದೆ‘ ಎಂದು ಅವರು ಹೇಳಿದರು.

ಇಟಲಿಯಲ್ಲಿ ಬೇಸಿಗೆ ವೇಳೆ ನಿತ್ಯ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿತ್ತು. ಆದರೆ ಕಳೆದ ಕೆಲ ವಾರಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು