ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ-ಭಾರತ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ: ಜೈಶಂಕರ್

Last Updated 13 ಫೆಬ್ರುವರಿ 2022, 11:14 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿನ ಹೊಸ ಹಂತವನ್ನು ಸಾಧಿಸುವಲ್ಲಿ ಅಲ್ಲಿನ ಭಾರತೀಯರು ವಹಿಸಿದ ಮಹತ್ತರ ಪಾತ್ರದ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಭಾನುವಾರ ಶ್ಲಾಘಿಸಿದ್ದಾರೆ.

ತಮ್ಮ ಆಸ್ಟ್ರೇಲಿಯಾ ಪ್ರವಾಸದ ವೇಳೆ ಜೈಶಂಕರ್ ಅವರು, ಭಾರತದ ಕುರಿತು ಸಕಾರಾತ್ಮಕ ಚಿತ್ರಣ ಮೂಡುವಲ್ಲಿ ಅಲ್ಲಿನ ಭಾರತೀಯರ ಸಮುದಾಯವು ವಹಿಸಿದ ಪಾತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಫೆ. 10ರಿಂದ ಪ್ರವಾಸದಲ್ಲಿರುವ ಜೈಶಂಕರ್ ಶುಕ್ರವಾರ ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ವಿದೇಶಾಂಗ ಸಚಿವರ 4ನೇ ಕ್ವಾಡ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಆಸ್ಟ್ರೇಲಿಯಾ ಪ್ರವಾಸದ ಬಳಿಕ ಜೈಶಂಕರ್ ಅವರು ಫೆ.13ರಿಂದ ಫಿಲಿಪ್ಪೀನ್ಸ್‌ಗೆ ಭೇಟಿ ನೀಡಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಫಿಲಿಪೈನ್ಸ್‌ಗೆ ಇದೇ ಮೊದಲ ಬಾರಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲಿ ಅವರು ಅಲ್ಲಿನ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಟಿಯೊಡೊರೊ ಎಲ್. ಲಾಕ್ಸಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT