ದುಶಾಂಬೆ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ಇಲ್ಲಿ ಇರಾನ್, ಅರ್ಮೇನಿಯಾ ಮತ್ತು ಉಜ್ಬೇಕಿಸ್ತಾನ ದೇಶಗಳ ಸಹವರ್ತಿ ನಾಯಕರನ್ನು ಭೇಟಿಯಾಗಿ, ಅಫ್ಗಾನಿಸ್ತಾನದ ಇತ್ತೀಚೆಗಿನ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.
ಇಲ್ಲಿ ಆರಂಭವಾಗಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ (ಎಸ್‌ಸಿಒ) ಪಾಲ್ಗೊಳ್ಳಲು ಬಂದಿರುವ ಜೈಶಂಕರ್ ಅವರು, ತಮ್ಮ ಸಹವರ್ತಿ ನಾಯಕರೊಂದಿಗೆ ಪ್ರಾದೇಶಿಕ ಸವಾಲುಗಳ ಎದುರಿಸುವ ಹಾಗೂ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
‘ಎಸ್‌ಒಸಿ ಶೃಂಗಸಭೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರನ್ನು ಭೇಟಿಯಾಗಿದ್ದು ಸಂತಸ ತರಿಸಿದೆ‘ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.
‘ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಮತ್ತು ಪ್ರಾದೇಶಿಕ ಸವಾಲುಗಳ ಎದುರಿಸುವುದಕ್ಕಾಗಿ ಒಟ್ಟಾಗಿ ಕೆಲಸ ಮಾಡುವ ಕುರಿತು ಈ ವೇಳೆ ಮಾತುಕತೆ ನಡೆಸಲಾಯಿತು’ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.