ಶುಕ್ರವಾರ, ಅಕ್ಟೋಬರ್ 29, 2021
20 °C

ಭಾರತ –ರಷ್ಯಾ ವಿದೇಶಾಂಗ ಸಚಿವರ ಭೇಟಿ: ಅಫ್ಗನ್, ಇಂಡೊ–ಪೆಸಿಫಿಕ್ ಕುರಿತು ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನೂರ್‌–ಸುಲ್ತಾನ್(ಕಜಕಿಸ್ತಾನ): ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲವ್ರೊವ್‌ ಅವರನ್ನು ಮಂಗಳವಾರ ಇಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಸಹಕಾರ ಸಂಬಂಧದ ಪ್ರಗತಿ ಮತ್ತು ಅಫ್ಗಾನಿಸ್ತಾನ ಮತ್ತು ಇಂಡೊ–ಪೆಸಿಫಿಕ್‌ನ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು.

ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸುವ ಮತ್ತು ಅಫ್ಗಾನಿಸ್ತಾನ ಸೇರಿದಂತೆ ಪ್ರಮುಖ ಪ್ರಾದೇಶಿಕ ಸಮಸ್ಯೆಗಳನ್ನು ಚರ್ಚಿಸುವ ಉದ್ದೇಶದಿಂದೊಂದಿಗೆ ಮೂರು ದಿನಗಳ ಮಧ್ಯ ಏಷ್ಯಾರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಜೈಶಂಕರ್ ಅವರು ಸೋಮವಾರ ಕಜಕಿಸ್ತಾನವನ್ನು ತಲುಪಿದರು.

ಇಲ್ಲಿ ನಡೆಯುತ್ತಿರುವ ಏಷ್ಯಾದಲ್ಲಿ ಸಂವಾದ ಮತ್ತು ಆತ್ಮವಿಶ್ವಾಸ ನಿರ್ಮಾಣ ಕ್ರಮಗಳ ಸಮ್ಮೇಳನದ(CICA) ಸಚಿವರ ಸಭೆಯಲ್ಲಿ ಪಾಲ್ಗೊಂಡಿದ್ದ ಲವ್ರೊವ್ ಅವರನ್ನು ಜೈಶಂಕರ್‌ ಭೇಟಿಯಾಗಿ ಮಾತುಕತೆ ನಡೆಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು