ಸೋಮವಾರ, ಅಕ್ಟೋಬರ್ 18, 2021
22 °C

ಕೋವಿಡ್‌ ಕ್ವಾರಂಟೈನ್‌: ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಜತೆ ಜೈಶಂಕರ್‌ ಚರ್ಚೆ

PTI Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್‌: ಕೋವಿಡ್‌ ಕ್ವಾರಂಟೈನ್‌ ವಿಷಯಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪರಿಹಾರ ಒದಗಿಸುವಂತೆ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರು ಬ್ರಿಟನ್‌ನ ವಿದೇಶಾಂಗ ಕಾರ್ಯದರ್ಶಿ ಎಲಿಜಬೆತ್‌ ಟ್ರಸ್ಸ್‌ ಅವರನ್ನು ಒತ್ತಾಯಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಉನ್ನತ ಮಟ್ಟದ ಅಧಿವೇಶನದಲ್ಲಿ ಭಾಗವಹಿಸಲು ಜೈಶಂಕರ್‌ ಅವರು ಸೋಮವಾರ ಇಲ್ಲಿಗೆ ಬಂದಿದ್ದಾರೆ.

ಎಲಿಜಬೆತ್‌ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಜೈಶಂಕರ್‌ ಅವರು ಅಫ್ಗಾನಿಸ್ತಾನದ ಪರಿಸ್ಥಿತಿ ಮತ್ತು ಭಾರತ–ಪೆಸಿಫಿಕ್‌  ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತೂ ಚರ್ಚಿಸಿದ್ದಾರೆ.

ಈ ಇಬ್ಬರು ಪರಸ್ಪರ ಭೇಟಿಯಾದ ದಿನದಂದೇ ಬ್ರಿಟನ್‌ ಕೋವಿಡ್‌ಗೆ ಸಂಬಂಧಿಸಿದಂತೆ ಹೊಸದಾಗಿ ಪ್ರಯಾಣ ನಿರ್ಬಂಧಗಳನ್ನು ವಿಧಿಸಿದೆ. ಈ ನಿರ್ಬಂಧದ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.

ಹೊಸ ನಿಯಮದ ಪ್ರಕಾರ ಭಾರತದ ಪ್ರಯಾಣಿಕರು ಕೋವಿಶೀಲ್ಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದರೂ ಅವರು ಲಸಿಕೆ ಪಡೆದಿಲ್ಲ ಎಂದೇ ಪರಿಗಣಿಸಲಾಗುವುದು ಮತ್ತು 10 ದಿನಗಳವರೆಗೆ ಅವರು  ಪ್ರತ್ಯೇಕವಾಗಿ ವಾಸಿಸಬೇಕಿದೆ.

ಜೈಶಂಕರ್‌ ಅವರು, ನಾರ್ವೆ ಮತ್ತು ಇರಾಕ್‌ನ ತಮ್ಮ ಸಹವರ್ತಿಗಳೊಂದಿಗೂ ಮಾತುಕತೆ ನಡೆಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು