ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ: ನ್ಯೂಜಿಲೆಂಡ್‌ಗೆ ಜೈಶಂಕರ್ ಮನವಿ

Last Updated 9 ಅಕ್ಟೋಬರ್ 2022, 11:20 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್ (ಪಿಟಿಐ): ಕೋವಿಡ್‌ನಿಂದಾಗಿ ಸಮಸ್ಯೆ ಎದುರಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟಗಳನ್ನು ಮಾನವೀಯ ದೃಷ್ಟಿಯಿಂದ ಬಗೆಹರಿಸಬೇಕು ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭಾನುವಾರ ನ್ಯೂಜಿಲೆಂಡ್ ಸರ್ಕಾರಕ್ಕೆ ಕೋರಿದರು.

ನ್ಯೂಜಿಲೆಂಡ್‌ಗೆ ಇದೇ ಮೊದಲ ಬಾರಿಗೆ ಭೇಟಿ ನೀಡಿರುವ ಅವರು, ಇಲ್ಲಿ ಭಾರತೀಯ ಹೈಕಮಿಷನ್‌ನ ಕಚೇರಿ ಉದ್ಘಾಟಿಸಿದರು. ಭಾರತೀಯ ಸಮುದಾಯ ಉದ್ದೇಶಿಸಿ ಮಾತನಾಡುತ್ತಾ, ಸಮಸ್ಯೆ ಕುರಿತು ನ್ಯೂಜಿಲೆಂಡ್‌ ವಿದೇಶಾಂಗ ಸಚಿವರ ಗಮನಸೆಳೆದಿದ್ದಾಗಿ ಹೇಳಿದರು.

‘ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಸಮಸ್ಯೆ ಎದುರಿಸಿದ್ದೇವೆ. ಆದರೆ, ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮವಾಗಿದೆ. ನ್ಯೂಜಿಲೆಂಡ್‌ ಪ್ರಧಾನಿ ಮತ್ತು ವಿದೇಶಾಂಗ ಸಚಿವರು ಇದನ್ನು ಮಾನವೀಯ, ಅನುಕಂಪದ ದೃಷ್ಟಿಯಿಂದ ಇದನ್ನು ಗಮನಿಸುತ್ತಾರೆ ಎಂದು ಆಶಿಸುತ್ತೇನೆ’ ಎಂದರು.

ಮಾಹಿತಿ ತಂತ್ರಜ್ಞಾನ, ಆತಿಥ್ಯ ಸೇವೆ, ವಿಜ್ಞಾನ, ಎಂಜಿನಿಯರಿಂಗ್, ವಾಸ್ತುಶಿಲ್ಪ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಉನ್ನತ ಶಿಕ್ಷಣಕ್ಕೆ ಭಾರತದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಭಾರತ ಮೂಲದ 2.5 ಲಕ್ಷ ಜನರು ಇಲ್ಲಿ ನೆಲೆಸಿದ್ದಾರೆ.

ವಿದೇಶಾಂಗ ಸಚಿವ ನಾನಯಾ ಮಹುಟ ಅವರೊಂದಿಗೆ ನಡೆದ ಸಭೆಯಲ್ಲಿ ಜೈಶಂಕರ್‌ ಅವರು, ವಿದ್ಯಾರ್ಥಿಗಳಿಗೆ ವೀಸಾ ನೀಡಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ಚರ್ಚಿಸಿದರು. ವಿದ್ಯಾರ್ಥಿಗಳಿಗೆ ನೆರವಾಗಲು ಈ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಕೋರಿದರು. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನೇರ ವಿಮಾನ ಸಂಚಾರ ಸೇವೆಯನ್ನು ಕಲ್ಪಿಸುವ ಕುರಿತಂತೆಯೂ ಅವರು ಪ್ರಸ್ತಾಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT