ಮಂಗಳವಾರ, ಜನವರಿ 26, 2021
18 °C

ನಾಳೆಯಿಂದ ಸಚಿವ ಜೈಶಂಕರ್ ಶ್ರೀಲಂಕಾ ಪ್ರವಾಸ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರದಿಂದ ಮೂರು ದಿನಗಳ ಕಾಲ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ.

ಶ್ರೀಲಂಕಾ ಭೇಟಿಯ ಸಂದರ್ಭದಲ್ಲಿ ಜೈಶಂಕರ್ ಅವರು ಭಾರತ ಮತ್ತು ಶ್ರೀಲಂಕಾದ ದ್ವಿಪಕ್ಷೀಯ ಸಂಬಂಧಗಳ ಕುರಿತು ಅಲ್ಲಿನ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

‘ಶ್ರೀಲಂಕಾದ ವಿದೇಶಾಂಗ ಸಚಿವ ದಿನೇಶ್ ಗುಣವರ್ಧೆನ ಅವರ ಆಹ್ವಾನದ ಮೇರೆಗೆ ಜೈಶಂಕರ್ ಅವರು ಜ. 5ರಿಂದ 7ರವರೆಗೆ ಪ್ರವಾಸ ಕೈಗೊಂಡಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘2021ರಲ್ಲಿ ವಿದೇಶಾಂಗ ಸಚಿವರ ಮೊದಲ ವಿದೇಶ ಪ್ರವಾಸ ಇದಾಗಿದ್ದು, ಹೊಸ ವರ್ಷಲ್ಲಿ ಶ್ರೀಲಂಕಾಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ವಿದೇಶಿ ಗಣ್ಯರ ಭೇಟಿ ಇದಾಗಿದೆ. ಉಭಯ ದೇಶಗಳ ನಡುವೆ ಎಲ್ಲಾ ಕ್ಷೇತ್ರಗಳಲ್ಲೂ ನಿಕಟ ಮತ್ತು ಸೌಹಾರ್ದಯುತವಾಗಿ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆಗಳು’ ಎಂದೂ ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು