ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಲಸಿಕಾ ಕೇಂದ್ರ ತೆರೆಯಲು ಮುಂದಾದ ಜಪಾನ್

Last Updated 24 ಮೇ 2021, 7:06 IST
ಅಕ್ಷರ ಗಾತ್ರ

ಟೋಕಿಯೊ: ಒಲಿಂಪಿಕ್ಸ್‌ ನಡೆಯುವ ಎರಡು ತಿಂಗಳ ಮುನ್ನವೇ ಜಪಾನ್ ಲಸಿಕೆ ಹಂಚಿಕೆಯನ್ನು ತ್ವರಿತಗೊಳಿಸುವ ಮೂಲಕ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಮುಂದಾಗಿದೆ. ಅದಕ್ಕಾಗಿ ಟೋಕಿಯೊ ಮತ್ತು ಒಸಾಕಾದಲ್ಲಿನ ಹಿರಿಯರಿಗೆ ಲಸಿಕೆ ನೀಡಲು ಸೋಮವಾರ ಸೇನಾ ವೈದ್ಯರು ಮತ್ತು ದಾದಿಯರನ್ನು ನಿಯೋಜಿಸಿದೆ.

ಒಂದು ವರ್ಷದ ವಿಳಂಬದ ನಂತರ ಪ್ರಧಾನಿ ಯೋಶಿಹಿದೆ ಸುಗಾ ಅವರು ಟೋಕಿಯೊದಲ್ಲಿ ಒಲಿಂಪಿಕ್ಸ್‌ ಆಯೋಜಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ಜುಲೈ ಹೊತ್ತಿಗೆ ರಾಷ್ಟ್ರದ 3.6 ಕೋಟಿ ಹಿರಿಯರಿಗೆ ಲಸಿಕೆ ನೀಡಲು ನಿರ್ಧರಿಸಿದ್ದಾರೆ.

ಇನ್ನೊಂದೆಡೆ ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅನೇಕ ಜಪಾನಿಯರು ಪ್ರತಿಭಟನೆ ನಡೆಸಿದ್ದು, ಜುಲೈ 23ರಿಂದ ಆರಂಭವಾಗಲಿರುವ ಕ್ರೀಡಾಕೂಟವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

ಸುಗಾ ಸರ್ಕಾರ ಕಳೆದ ಏಪ್ರಿಲ್‌ನಿಂದ ಕೋವಿಡ್‌ ನಿಯಂತ್ರಣಕ್ಕೆ ತುರ್ತು ಪರಿಸ್ಥಿತಿ ಹೇರಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಆದರೆ, ಈಗಲೂ ಕೋವಿಡ್‌ ಪ್ರಕರಣಗಳು ಹೆಚ್ಚಾಗಿವೆ. ಸೋಂಕು ನಿಯಂತ್ರಣಕ್ಕೆ ಲಸಿಕೆಯೊಂದೇ ಪರಿಹಾರವಾಗಿದೆ ಎಂದು ಸುಗಾ ತಿಳಿಸಿದ್ದಾರೆ.

ಮುಂದಿನ ಮೂರು ತಿಂಗಳಲ್ಲಿ ಟೋಕಿಯೊದಲ್ಲಿ ಪ್ರತಿದಿನ 10 ಸಾವಿರ ಮಂದಿ ಮತ್ತು ಒಸಾಕಾದಲ್ಲಿ ಪ್ರತಿದಿನ 5 ಸಾವಿರ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT