ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯದ ಕಾರಣ ಜಪಾನ್‌ ಪ್ರಧಾನಿ ಶಿಂಜೊ ಅಬೆ ರಾಜೀನಾಮೆ

Last Updated 28 ಆಗಸ್ಟ್ 2020, 10:26 IST
ಅಕ್ಷರ ಗಾತ್ರ

ಟೋಕಿಯೊ: ಜಪಾನ್‌ನ ಪ್ರಧಾನ ಮಂತ್ರಿ ಶಿಂಜೊ ಅಬೆ ಅವರುಅನಾರೋಗ್ಯದಿಂದಾಗಿತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಲ ದಿನಗಳಿಂದ ಶಿಂಜೊ ಅವರ ಆರೋಗ್ಯ ಬಿಗಡಾಯಿಸಿದ್ದು, ಚಿಕಿತ್ಸೆಗಾಗಿ ಅವರು ಒಂದೇ ತಿಂಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿರುವ ಶಿಂಜೊ ಅವರ ಅಧಿಕಾರಾವಾಧಿ 2021ರ ಸೆಪ್ಟೆಂಬರ್‌ಗೆ ಪೂರ್ಣಗೊಳ್ಳುತ್ತಿತ್ತು. ಲಿಬರಲ್‌ ಡೆಮಾಕ್ರಟಿಕ್‌ ಪಕ್ಷವು ಪ್ರಧಾನಿ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆಮಾಡುವವರೆಗೂ ಶಿಂಜೊ ಅವರು ಈ ಹುದ್ದೆಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ.

‘ನಾನು ಅಲ್ಸರೇಟಿವ್ ಕೊಲಿಟಿಸ್‌ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯಲು ನಿರ್ಧರಿಸಿದ್ದೇನೆ. ಜನರ ನಿರೀಕ್ಷೆಗೆಅನುಗುಣವಾಗಿ, ಆತ್ಮವಿಶ್ವಾಸದಿಂದ ಕೆಲಸ ಮಾಡಲು ಈಗ ಆಗುತ್ತಿಲ್ಲ. ಹೀಗಾಗಿಯೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ’ ಎಂದು ಶಿಂಜೊ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

‘ನನ್ನ ಅಧಿಕಾರಾವಧಿ ಮುಗಿಯಲು ಇನ್ನು ಒಂದು ವರ್ಷ ಬಾಕಿ ಇದೆ. ಹೀಗಿದ್ದೂ ಈ ಹುದ್ದೆಯನ್ನು ತ್ಯಜಿಸಿರುವುದಕ್ಕೆ ಜಪಾನ್‌ ಪ್ರಜೆಗಳ ಕ್ಷಮೆಯಾಚಿಸುತ್ತೇನೆ. ಕೊರೊನಾ ಬಿಕ್ಕಟ್ಟು ನಿಭಾಯಿಸಬೇಕಾದ ಸಂದರ್ಭದಲ್ಲಿ, ಇನ್ನೂ ಕೆಲ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಹಂತದಲ್ಲೇ ಹುದ್ದೆಯಿಂದ ನಿರ್ಗಮಿಸುತ್ತಿರುವುದಕ್ಕೆ ಮತ್ತೊಮ್ಮೆಕ್ಷಮೆಯಾಚಿಸುತ್ತಿದ್ದೇನೆ’ ಎಂದಿದ್ದಾರೆ.

ಶಿಂಜೊ ಅವರ ಅಜ್ಜ ನೊಬುಸಿಕೆ ಕಿಶಿ ಅವರೂ ಜಪಾನ್‌ನ ಪ್ರಧಾನಿಯಾಗಿದ್ದರು. ಶಿಂಜೊ ಅವರು ಜಪಾನ್‌ನ ಅತಿ ಕಿರಿಯ ಪ್ರಧಾನಿ ಎಂಬ ಶ್ರೇಯಕ್ಕೂ ಪಾತ್ರರಾಗಿದ್ದರು. 2006ರಲ್ಲಿ ಈ ಹುದ್ದೆಗೇರಿದಾಗ ಅವರಿಗೆ 52 ವರ್ಷ ವಯಸ್ಸಾಗಿತ್ತು.

ಆರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಅವರು ರಕ್ಷಣೆ, ಆಂತರಿಕ ಭದ್ರತೆ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉತ್ತಮ ಕೆಲಸಗಳನ್ನು ಮಾಡಿ ಜಪಾನ್‌ ಅನ್ನು ಮಾದರಿ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT