ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ನ ನೂತನ ಪ್ರಧಾನಿ ಆಗಲಿದ್ದಾರೆ ಫುಮಿಯೊ ಕಿಶಿದ

Last Updated 29 ಸೆಪ್ಟೆಂಬರ್ 2021, 8:33 IST
ಅಕ್ಷರ ಗಾತ್ರ

ಟೋಕಿಯೊ: ಜಪಾನ್‌ನ ಆಡಳಿತಾರೂಢ ಲಿಬರಲ್‌ ಡೆಮಾಕ್ರಟಿಕ್ ಪಕ್ಷವು ಮಾಜಿ ವಿದೇಶಾಂಗ ಸಚಿವ ಫುಮಿಯೊ ಕಿಶಿದ ಅವರನ್ನು ಬುಧವಾರ ತಮ್ಮ ಪಕ್ಷದ ನೂತನ ನಾಯಕನನ್ನಾಗಿ ಆಯ್ಕೆ ಮಾಡಿತು.

ಈ ಮೂಲಕ ಫುಮಿಯೊ ಕಿಶಿದ ಅವರು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರದ ಪ್ರಧಾನಿ ಪಟ್ಟವನ್ನು ಅಲಂಕರಿಸಲಿದ್ದಾರೆ.

ಆಡಳಿತಾರೂಢ ಎಲ್‌ಡಿಪಿ ಪಕ್ಷ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ಸಂಸತ್ತಿ ನಲ್ಲಿ ನಡೆಯುವ ಚುನಾವಣೆಯಲ್ಲಿ, 64ರ ಹರೆಯದ ಫುಮಿಯಾ ಅವರು ಹೊಸ ಪ್ರಧಾನಿಯಾಗಿ ಅಧಿಕೃತವಾಗಿ ಆಯ್ಕೆಯಾಗುತ್ತಾರೆ. ನಂತರ ಪುಮಿಯಾ ಅವರು ನವೆಂಬರ್ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ.

ಹಿರೋಷಿಮಾ ಮೂಲದ ರಾಜಕೀಯ ಕುಟುಂಬದ ಕುಡಿಯಾಗಿರುವ ಕಿಶಿದಾ ಅವರು, ಕಳೆದ ವರ್ಷ ಯಶೋಹಿಡೆ ಸುಗಾ ವಿರುದ್ಧ ಪ್ರಧಾನಿ ಹುದ್ದೆಯ ಚುನಾವಣೆಯಲ್ಲಿ ಸೋತಿದ್ದರು. ಅಂದಿನಿಂದಲೂ ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT