ಟೋಕಿಯಾ: ಜಪಾನ್ ಪ್ರಧಾನಿ ಫೆಮಿಯೊ ಕಿಶಿದಾ ಅವರು ಉಕ್ರೇನ್‌ಗೆ ಭೇಟಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಫೆಮಿಯೊ ಕಿಶಿದಾ ಅವರು ಉಕ್ರೇನ್‌ನ ಕೀವ್‌ನಲ್ಲಿ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ಜಿ–7 ನಾಯಕರು ಜತೆ ಸಭೆ ನಡೆಸಿದ್ದಾರೆ.
ರಷ್ಯಾ ವಿರುದ್ಧದ ಹೋರಾಟದಲ್ಲಿ ಉಕ್ರೇನ್ ಜನರು ತೋರಿದ ಧೈರ್ಯ ಮತ್ತು ಪರಿಶ್ರಮಕ್ಕೆ ಗೌರವ ಸಲ್ಲಿಸಿರುವ ಕಿಶಿದಾ, ಉಕ್ರೇನ್‌ಗೆ ಸಕಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಭರವಸೆ ನೀಡಿರುವುದಾಗಿ ಎಂದು ಜಪಾನ್‌ನ ವಿದೇಶಾಂಗ ಸಚಿವಾಲಯದ ಮಾಹಿತಿಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ’ಎಎಫ್‌ಪಿ’ ವರದಿ ಮಾಡಿದೆ.
ಇತ್ತೀಚೆಗೆ ಭಾರತಕ್ಕೆ ಭೇಟಿ ಕೊಟ್ಟಿದ್ದ ಕಿಶಿದಾ, ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶವನ್ನು ಮುಕ್ತ ಹಾಗೂ ಸ್ವತಂತ್ರವಾಗಿರಿಸುವ ಹೊಸ ಯೋಜನೆಯೊಂದನ್ನು ಪ್ರಕಟಿಸಿದ್ದರು.
ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ್ದ ಕಿಶಿದಾ, ‘‘ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶದಲ್ಲಿರುವ ದೇಶಗಳ ಆರ್ಥಿಕತೆಗೆ (ಕಾರ್ಖಾನೆ ಸ್ಥಾಪನೆಯಿಂದ ವಿಪತ್ತು ತಡೆವರೆಗೆ) ಸಹಾಯ ಮಾಡುವ ಉದ್ದೇಶದಿಂದ 75 ಬಿಲಿಯನ್ ಡಾಲರ್‌ನಷ್ಟು (ಅಂದಾಜು 6.15 ಲಕ್ಷ ಕೋಟಿ) ಹೂಡಿಕೆ ಮಾಡಲಾಗುವುದು. ನಮ್ಮ ಗುರಿಯನ್ನು ತಲುಪುವಲ್ಲಿ ಭಾರತವು ಮುಖ್ಯವಾದ ಪಾತ್ರವಹಿಸಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ ಅವರು, ‘ಭಾರತ–ಜಪಾನ್‌ನ ಪಾಲುದಾರಿಕೆಯು ಎರಡೂ ದೇಶಗಳಿಗೆ ಮಾತ್ರ ಮುಖ್ಯವಾದುದಲ್ಲ. ಬದಲಿಗೆ ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ನೆಲೆಸುವಲ್ಲಿಯೂ ನಮ್ಮ ಸಂಬಂಧ ಮುಖ್ಯ ಪಾತ್ರವಹಿಸುತ್ತದೆ’ ಎಂದಿದ್ದರು.
ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾದ ಆಕ್ರಮಣಕಾರಿ ವರ್ತನೆಯನ್ನು ತಡೆಯಲು ಈ ದೇಶಗಳ ಜೊತೆಗೆ ಸ್ನೇಹವನ್ನು ಗಟ್ಟಿ ಮಾಡಿಕೊಳ್ಳುವ ಉದ್ದೇಶದಿಂದ ಕಿಶಿದಾ ಅವರು ಈ ಯೋಜನೆಯ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.