ಬುಧವಾರ, ಜೂನ್ 29, 2022
26 °C

ಕೋವಿಡ್‌–19 ವಿರುದ್ಧ ಜಂಟಿಯಾಗಿ ಹೋರಾಡಲು ಅಮೆರಿಕ, ಫ್ರಾನ್ಸ್‌ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಮತ್ತು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್‌ ಮ್ಯಾಕ್ರನ್‌ ಅವರು ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಚೀನಾ ಸೇರಿದಂತೆ ವಿದೇಶಾಂಗ ನೀತಿಗಳ ಆದ್ಯತೆ ಮೇಲೆ ಒಟ್ಟಾಗಿ ಕೆಲಸ ಮಾಡುವ ಬಗ್ಗೆಯೂ ಉಭಯ ನಾಯಕರು ಒಮ್ಮತ ಅಭಿಪ್ರಾಯಕ್ಕೆ ಬಂದಿದ್ದಾರೆ.

ಜೋ ಬೈಡನ್‌ ಅವರು ಭಾನುವಾರ ಇಮ್ಯಾನುವೆಲ್‌ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದರು.  

‘ಹವಾಮಾನ ಬದಲಾವಣೆ, ಕೋವಿಡ್‌–19 ಮತ್ತು ಸೋಂಕಿನಿಂದ ಸೃಷ್ಟಿಯಾಗಿರುವ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಜಂಟಿಯಾಗಿ ಹೋರಾಡಲು ಉಭಯ ನಾಯಕರು ನಿರ್ಧರಿಸಿದ್ದಾರೆ’ ಎಂದು ಶ್ವೇತ ಭವನ ತಿಳಿಸಿದೆ.

ಅಲ್ಲದೆ ಚೀನಾ, ಮಧ್ಯ ಪ್ರಾಚ್ಯ ರಾಷ್ಟ್ರಗಳು, ರಷ್ಯಾ ಮತ್ತು ಪಶ್ಚಿಮ ಆಫ್ರಿಕಾದ ಸಹೇಲ್‌ ಪ್ರಾಂತ್ಯದ ಬಗೆಗಿನ ವಿದೇಶಾಂಗ ನೀತಿ ಆದ್ಯತೆ ಕುರಿತಂತೆಯೂ ಒಟ್ಟುಗೂಡಿ ಕಾರ್ಯನಿರ್ವಹಿಸಲು ಉಭಯತ್ರರೂ ನಿರ್ಧರಿಸಿದ್ದಾರೆ ಎಂದು ತಿಳಿಸಿವೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು