ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋ ಬೈಡನ್ ಆಯ್ಕೆ ಭಾರತಕ್ಕೆ ಒಳ್ಳೆಯದಲ್ಲ: ಡೊನಾಲ್ಡ್ ಟ್ರಂಪ್ ಪುತ್ರ

Last Updated 19 ಅಕ್ಟೋಬರ್ 2020, 6:45 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷ ಸ್ಥಾನದ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರ ಆಯ್ಕೆಯಿಂದ ಭಾರತಕ್ಕೆ ಒಳ್ಳೆಯದಾಗದು. ಅವರು ಚೀನಾ ಮೇಲೆ ಮೃದು ಧೋರಣೆ ಹೊಂದಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ, ಉದ್ಯಮಿ ಡೊನಾಲ್ಡ್ ಟ್ರಂಪ್ ಜ್ಯೂನಿಯರ್ ಹೇಳಿದ್ದಾರೆ.

ಜೋ ಬೈಡನ್ ಮತ್ತು ಅವರ ಕುಟುಂಬದ ಭ್ರಷ್ಟಾಚಾರದ ಬಗ್ಗೆ ತಾವು ಪ್ರಕಟಿಸಿರುವ ಪುಸ್ತಕದ ಯಶಸ್ಸಿನ ಆಚರಣೆಗಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಆಯ್ದ ಬೆಂಬಲಿಗರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

‘ನಾವು ಚೀನಾದ ಬೆದರಿಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಬಹುಶಃ ಈ ವಿಚಾರದ ಬಗ್ಗೆ ಭಾರತೀಯ–ಅಮೆರಿಕನ್ನರಿಗಿಂತ ಹೆಚ್ಚು ಯಾರಿಗೂ ತಿಳಿದಿರಲಾರದು’ ಎಂದು ಹೇಳಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಟ್ರಂಪ್ ಅತ್ಯುತ್ತಮ ಬಾಂಧವ್ಯ ಹೊಂದಿದ್ದಾರೆ. ಸೋಶಿಯಲಿಸಂ ಮತ್ತು ಕಮ್ಯೂನಿಸಂ ವಿರುದ್ಧದ ಹೋರಾಟದಲ್ಲಿ ಭಾರತ, ಅಮೆರಿಕ ಒಂದಾಗಿರಬೇಕೆಂದು ಉಭಯ ನಾಯಕರು ಭಾವಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಸದ್ಯ ಡೊನಾಲ್ಡ್ ಟ್ರಂಪ್ ಜ್ಯೂನಿಯರ್ ಇವರು ಟ್ರಂಪ್ ಪರ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ನವೆಂಬರ್ 3ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT