ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಮುಂದಿನ ವಾರ ನ್ಯಾಟೊ ಸದಸ್ಯ ರಾಷ್ಟ್ರಗಳ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.
ಬೈಡನ್ ಅವರು ಮುಂದಿನ ವಾರ ಬ್ರಸೆಲ್ಸ್‌ಗೆ ತೆರಳಿ ನ್ಯಾಟೊ ಸದಸ್ಯ ರಾಷ್ಟ್ರಗಳ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ. ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧಕ್ಕೆ ಸಂಬಂಧಿಸಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.
ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ಸೇನೆಯು 'ನ್ಯಾಟೊ' ಪ್ರದೇಶಗಳ ಮೇಲೆ ಏನಾದರೂ ದಾಳಿ ನಡೆಸಿದರೆ, ಅದಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು ಬ್ರಿಟನ್ ಆರೋಗ್ಯ ಸಚಿವ ಸಾಜೀದ್ ಜಾವಿದ್ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.
ಮತ್ತೊಂದೆಡೆ, ರಷ್ಯಾ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಷ್ಯಾ ಪಡೆಗಳು ಕೀವ್ ಮತ್ತು ಇತರ ನಗರಗಳ ಮೇಲಿನ ದಾಳಿಯನ್ನು ಮುಂದುವರಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.