ಭಾನುವಾರ, ನವೆಂಬರ್ 29, 2020
20 °C

ಅಧಿಕಾರ ಹಸ್ತಾಂತರ ವಿಳಂಬ ಟ್ರಂಪ್ ಬೇಜವಾಬ್ದಾರಿ ಎಂದ ಜೋ ಬೈಡನ್

ಎಎನ್‌ಐ‌ Updated:

ಅಕ್ಷರ ಗಾತ್ರ : | |

Joe Biden

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿದ್ದು, ನಂಬಲಸಾಧ್ಯವಾದ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ನಿಯೋಜಿತ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಪ್ರಜಾಪ್ರಭುತ್ವವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಜಗತ್ತಿನ ಇತರ ದೇಶಗಳಿಗೆ ಹಾನಿಕಾರಕ ಸಂದೇಶ ನೀಡಲಾಗುತ್ತಿದೆ ಎಂದು ಬೈಡನ್ ಹೇಳಿರುವುದಾಗಿ ನ್ಯೂಯಾರ್ಕ್ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: 

ಟ್ರಂಪ್ ಅವರ ಈ ನಡೆಯಿಂದ ಅವರನ್ನು ಅತ್ಯಂತ ಬೇಜವಾಬ್ದಾರಿಯುತ ನಾಯಕ ಎಂದು ಅಮೆರಿಕದ ಇತಿಹಾಸವು ನೆನಪಿಸಿಕೊಳ್ಳುವುದು ಖಾತ್ರಿಯಾಗಿದೆ ಎಂದೂ ಬೈಡನ್ ಹೇಳಿದ್ದಾರೆ.

‘ಅವರ ನಡೆ ಏನು ಎಂಬುದು ನನಗೆ ಗೊತ್ತಿಲ್ಲ. ನನ್ನ ಪ್ರಕಾರ ಅದು ಬೇಜವಾಬ್ದಾರಿತನ ಅಷ್ಟೆ. ಆ ವ್ಯಕ್ತಿ ಏನು ಯೋಚಿಸುತ್ತಾರೆ ಎಂಬುದನ್ನು ಅರಿಯುವುದೇ ಕಷ್ಟವಾಗಿದೆ. ನನಗೆ ವಿಶ್ವಾವಿದೆ, ಅವರು ಚುನಾವಣೆಯಲ್ಲಿ ಗೆದ್ದಿಲ್ಲ, ಗೆಲ್ಲುವುದೂ ಇಲ್ಲ. 2020ರ ಜನವರಿಯಲ್ಲಿ ನಾವು ಅಧಿಕಾರ ಸ್ವೀಕರಿಸುತ್ತೇವೆ’ ಎಂದು ಬೈಡನ್ ಹೇಳಿದ್ದಾರೆ.

ಇದನ್ನೂ ಓದಿ: 

ಚುನಾವಣಾ ಫಲಿತಾಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್ ಸೋಲೊಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ‘ನಾನು ಬೈಡನ್ ವಿರುದ್ಧ ಚುನಾವಣೆಯಲ್ಲಿ ಗೆದ್ದಿದ್ದೇನೆ’ ಪುನರುಚ್ಚರಿಸುತ್ತಿದ್ದಾರೆ. ಟ್ರಂಪ್ ಅವರ ಚುನಾವಣಾ ತಂಡದವರು, ಪ್ರಮುಖ ರಾಜ್ಯಗಳಲ್ಲಿ ಬಂದಿರುವ ಫಲಿತಾಂಶದ ವಿರುದ್ಧ ಮೊಕದ್ದಮೆಗಳನ್ನೂ ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು