ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಾಸ್ತ್ರ, ಆಹಾರ, ಹಣ, ನಿರಾಶ್ರಿತರಿಗೆ ನೆಲೆ: ಉಕ್ರೇನ್‌ಗೆ ಬೈಡನ್‌ ಭರವಸೆ

Last Updated 15 ಮಾರ್ಚ್ 2022, 2:26 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಯುದ್ಧಪೀಡಿತ ಉಕ್ರೇನ್‌ಗೆ ಶಸ್ತ್ರಾಸ್ತ್ರ, ಆಹಾರ, ಹಣ ನೀಡುವುದಾಗಿ ಹೇಳಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಅಲ್ಲಿನ ನಿರಾಶ್ರಿತರಿಗೆ ನೆಲೆ ಒದಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಸೋಮವಾರ ರಾತ್ರಿ ಟ್ವೀಟ್‌ ಮಾಡಿರುವ ಅವರು, ’ಆಕ್ರಮಣಕಾರಿ ರಷ್ಯಾದ ಪಡೆಯ ವಿರುದ್ಧ ಹೋರಾಡಲು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳು ಸಿಗಲಿವೆ. ಉಕ್ರೇನ್‌ನ ಜೀವಗಳನ್ನು ಉಳಿಸಲು ನಾವು ಹಣ, ಆಹಾರದ ನೆರವು ನೀಡುತ್ತೇವೆ. ಉಕ್ರೇನ್‌ ನಿರಾಶ್ರಿತರನ್ನು ಮುಕ್ತವಾಗಿ ಸ್ವಾಗತಿಸುತ್ತೇವೆ’ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ತಮ್ಮ ಖಾಸಗಿ ಟ್ವಿಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಬೈಡನ್‌, ‘ಅಮೆರಿಕನ್ನರು ಮತ್ತು ಈ ಜಗತ್ತು ಉಕ್ರೇನ್ ಜನರೊಂದಿಗೆ ಗಟ್ಟಿಯಾಗಿ ನಿಲ್ಲಲಿದೆ. ನಿರಂಕುಶಾಧಿಕಾರಿಗಳು ಮತ್ತು ಸಾಮ್ರಾಜ್ಯಶಾಹಿಗಳು ಜಗತ್ತಿನ ದಿಕ್ಕು ಬದಲಿಸಲು ನಾವು ಬಿಡುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ಫೆ. 24ರಂದು ಉಕ್ರೇನ್‌ ವಿರುದ್ಧ ವಿಶೇಷ ಮಿಲಿಟರಿ ಕಾರ್ಯಾಚರಣೆ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT