ಶನಿವಾರ, ಆಗಸ್ಟ್ 13, 2022
26 °C

ಅಮೆರಿಕ: ಬಂದೂಕು ನಿಯಂತ್ರಣ ಮಸೂದೆಗೆ ಅಧ್ಯಕ್ಷ ಜೋ ಬೈಡನ್‌ ಅಂಕಿತ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಉಭಯ ಪಕ್ಷೀಯ ಬಂದೂಕು ನಿಯಂತ್ರಣ ಮಸೂದೆ’ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಶನಿವಾರ ಸಹಿ ಹಾಕಿದ್ದಾರೆ. ಈ ಮಸೂದೆಗೆ ಅಮೆರಿಕದ ಕಾಂಗ್ರೆಸ್‌ನ ಉಭಯ ಸದನಗಳು (ಸಂಸತ್) ಶುಕ್ರವಾರವಷ್ಟೇ ಅನುಮೋದನೆ ನೀಡಿದ್ದವು.

ಯುರೋಪಿನ ಎರಡು ಶೃಂಗಸಭೆಗಳಲ್ಲಿ ಭಾಗವಹಿಸಲು ವಾಷಿಂಗ್ಟನ್‌ನಿಂದ ಹೊರಡುವ ಮುನ್ನ ಮಸೂದೆಗೆ ಸಹಿ ಮಾಡಿದ ಬೈಡನ್‌, ‘ಗುಂಡಿನ ದಾಳಿಗೆ ಬಲಿಯಾದವರ ಕುಟುಂಬದವರು ನಮ್ಮಿಂದ ಏನನ್ನೋ ನಿರೀಕ್ಷಿಸಿದ್ದರು. ಅದನ್ನು ನಾವೀಗ ಮಾಡಿದ್ದೇವೆ’ ಎಂದರು.  

ಅಮೆರಿಕದಲ್ಲಿ ಇತ್ತೀಚೆಗೆ ಬಂದೂಕುಧಾರಿಗಳು ನಡೆಸಿದ ಸಾಮೂಹಿಕ ಗುಂಡಿನ ದಾಳಿಗಳಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದರು. ಕಳೆದ ತಿಂಗಳು ಟೆಕ್ಸಾಸ್‌ನ ಯವಾಲ್ಡೆಯ ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ್ದ ಗುಂಡಿನ ದಾಳಿಯಲ್ಲಿ 19 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟಿದ್ದರು. ಈ ಘಟನೆ ನಡೆದ ತಿಂಗಳ ಬಳಿಕ, 13 ಶತಕೋಟಿ ಡಾಲರ್‌ ಮೊತ್ತದ ಪ್ಯಾಕೇಜ್‌ನ ಈ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು