ವಾಷಿಂಗ್ಟನ್: ಅಮೆರಿಕದಲ್ಲಿ ದೈನಂದಿನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೋವಿಡ್ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಲಾಗಿದೆ ಎಂದು ಶ್ವೇತಭವನ ತಿಳಿಸಿದೆ.
ಕೋವಿಡ್ ಡೆಲ್ಟಾ ರೂಪಾಂತರದ ಸಾಂಕ್ರಾಮಿಕವನ್ನು ತಡೆಗಟ್ಟಲು ಲಸಿಕೆ ನೀಡುವಿಕೆಯನ್ನು ಹೆಚ್ಚಿಸಲು ಹೊಸ ಯೋಜನೆಗಳನ್ನು ರೂಪಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.
ಜನರನ್ನು ಲಸಿಕೆ ಪಡೆಯುವಂತೆ ಮನವೊಲಿಸುವುದು, ಲಸಿಕೆ ಹಾಕಿಸಿಕೊಂಡವರು ಹಾಗೂ ವೈದ್ಯಕೀಯ ಸಿಬ್ಬಂದಿ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕೊರೊನಾ ಸೋಂಕು ಪರೀಕ್ಷೆಗಳನ್ನು ಹೆಚ್ಚಿಸುವುದರ ಜತೆಗೆ, ಆರ್ಥಿಕ ಚೇತರಿಕೆ ಮತ್ತು ಶಾಲೆಗಳನ್ನು ಪುನರಾರಂಭಿಸಲು ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ಬೈಡನ್ ಸಲಹೆ ನೀಡಿದ್ದಾರೆ ಎಂದು ಜೆನ್ ಸಾಕಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.