ಭಾನುವಾರ, ಜನವರಿ 17, 2021
22 °C

ಅಮೆರಿಕ ವಿದೇಶಾಂಗ ಕಾರ್ಯದರ್ಶಿಯಾಗಿ ಅಂಥೋನಿ ಬ್ಲಿಂಕೆನ್?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್‌ ಅವರು ತಮ್ಮ ವಿದೇಶಾಂಗ ನೀತಿಗಳ ಸಲಹೆಗಾರ ಅಂಥೋನಿ ಬ್ಲಿಂಕೆನ್ ಅವರನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ ಮತ್ತು ಜೇಕ್ ಸುಲ್ಲಿವಾನ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರನ್ನಾಗಿ ನೇಮಿಸವ ಸಂಭವವಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಬರಾಕ್‌ ಒಬಾಮಾ ಅವರ ಆಡಳಿತದ ಎರಡನೇ ಅವಧಿಯಲ್ಲಿ ಬ್ಲಿಂಕೆನ್ ಅವರು ಅಮೆರಿಕದ ವಿದೇಶಾಂಗ ಉಪ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಬೈಡನ್‌ ಉಪಾಧ್ಯಕ್ಷರಾಗಿದ್ದಾಗ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಬೈಡನ್‌ ಪ್ರಚಾರ ತಂಡದಲ್ಲಿ ವಿದೇಶಾಂಗ ನೀತಿಗಳ ಸಲಹೆಗಾರ ಕೂಡ ಆಗಿದ್ದರು.

ಇತರ ರಾಷ್ಟ್ರಗಳೊಂದಿಗೆ ಅಮೆರಿಕದ ಸಂಬಂಧ ವೃದ್ಧಿಗೆ ಬೈಡನ್ ಅವರು ಈ ಕ್ರಮ ಕೈಗೊಳ್ಳುವ ಸಂಭವವಿದೆ ಎಂದು ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ. ಮೂಲಗಳನ್ನು ಉಲ್ಲೇಖಿಸಿ ಮಂಗಳವಾರ ಈ ಬಗ್ಗೆ ಪ್ರಕಟಣೆ ಹೊರಬೀಳಬಹುದು ಎಂದಿದೆ. 

ಬೈಡನ್‌ ಅವರ ಇನ್ನೊಬ್ಬ ಸಲಹೆಗಾರ ಜೇಕ್‌ ಸುಲ್ಲಿವಾನ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಿಸುವ  ಸಾಧ್ಯತೆಯಿದೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು