ಗುರುವಾರ , ಜೂನ್ 17, 2021
21 °C

ಕಮಲಾ ಹ್ಯಾರಿಸ್ ಉತ್ತಮ ಆಯ್ಕೆ: ಹಿಲರಿ ಕ್ಲಿಂಟನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್: 'ಅಮೆರಿಕದ ಉಪಾಧ್ಯಕ್ಷ ಸ್ಥಾನಕ್ಕೆ ಕಮಲಾದೇವಿ ಹ್ಯಾರಿಸ್ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ ಮೂಲಕ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅವರು ಸರಿಯಾದ ಆಯ್ಕೆಯನ್ನೇ ಮಾಡಿದ್ದಾರೆ' ಎಂದು ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್‌ ಶ್ಲಾಘಿಸಿದ್ದಾರೆ.

ಇಲ್ಲಿ ಆನ್‌ಲೈನ್‌ ಮೂಲಕ ನಡೆದ ಡೆಮಾಕ್ರಟಿಕ್‌ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ’ಅಮೆರಿಕದ ನಾಗರಿಕರು ಡೆಮಾಕ್ರಟಿಕ್ ಪಕ್ಷಕ್ಕೆ ಮತ ಹಾಕುವ ಮೂಲಕ, ಈಗ ದುಃಸ್ಥಿತಿಗೆ ಕೊಂಡೊಯ್ದಿರುವ ದೇಶವನ್ನು, ಉತ್ತಮ ಸ್ಥಿತಿಗೆ ವಾಪಸ್ ತರಲು ನೆರವಾಗಬೇಕು’ ಎಂದು ಹೇಳಿದ್ದಾರೆ.

‘ಈ ಬಾರಿಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿಯ ರಾಜಕೀಯ ನಿಲುವನ್ನು ಲಘುವಾಗಿ ಪರಿಗಣಿಸಬೇಡಿ’ ಎಂದು ಮತದಾರಲ್ಲಿ ಮನವಿ ಮಾಡಿದ ಅವರು, ’ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು’ ಎಂದು ಹಿಲರಿ ಕ್ಲಿಂಟನ್‌ ಒತ್ತಾಯಿಸಿದರು.

‘ನಾವೆಲ್ಲ ಒಟ್ಟಾಗಿ ಬೈಡನ್ – ಕಮಲಾ ಹ್ಯಾರಿಸ್ ತಂಡವನ್ನು ಆಯ್ಕೆ ಮಾಡಿದರೆ, ನಮ್ಮ ಒಗ್ಗಟ್ಟು ಬಲಯುತವಾಗುತ್ತದೆ. ಆಗ ದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು