ಸೋಮವಾರ, ಮಾರ್ಚ್ 1, 2021
29 °C

ಭಾರತ-ಅಮೆರಿಕ ಸಂಬಂಧ ಮತ್ತಷ್ಟು ಬಲಿಷ್ಠವಾಗಲಿದೆ: ಶ್ವೇತ ಭವನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ಇನ್ನಷ್ಟು ಬಲಿಷ್ಠಗೊಳ್ಳಲಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಅಧ್ಯಕ್ಷ ಜೋ ಬೈಡನ್‌ ಅವರು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಗೌರವಿಸುತ್ತಾರೆ. ಈ ಸಂಬಂಧ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತಾರೆ’ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಪ್ಸಾಕಿ ವರದಿಗಾರರಿಗೆ ತಿಳಿಸಿದ್ದಾರೆ.

‘ಭಾರತ ಮೂಲದ ಅಮೆರಿಕನ್‌ ಕಮಲಾ ಹ್ಯಾರಿಸ್‌ ಅವರನ್ನು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಮಾಡಿದವರೇ ಬೈಡನ್‌. ಕಮಲಾ ಹ್ಯಾರಿಸ್ ಅವರು ಬುಧವಾರ ಮೊದಲ ಭಾರತ ಸಂಜಾತ ಅಮೆರಿಕನ್‌ ಉಪಾಧ್ಯಕ್ಷೆಯಾಗಿ ‍ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೊಂದು ಐತಿಹಾಸಿಕ ಕ್ಷಣ. ಹಾಗಾಗಿ ಇದು ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸಲಿದೆ’ ಎಂದು ಜೆನ್‌ ಅಭಿ‍ಪ್ರಾಯಟ್ಟಿದ್ದಾರೆ.

ಇದನ್ನೂ ಓದಿ: 

ಕಮಲಾ ಹ್ಯಾರಿಸ್‌ ಅವರು ಅಮೆರಿಕದ ಉಪಾಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಥಮ ಭಾರತ ಸಂಜಾತ ಮಹಿಳೆ ಮಾತ್ರವಲ್ಲದೆ ಪ್ರಥಮ ಕಪ್ಪು ವರ್ಣೀಯ ಮತ್ತು ಆಫ್ರಿಕ ಮೂಲದ ಅಮೆರಿಕದ ಪ್ರಥಮ ಮಹಿಳೆಯೂ ಆಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು