ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಕೋವಿಡ್‌ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ: ಕಮಲಾ ಹ್ಯಾರಿಸ್

Last Updated 8 ಮೇ 2021, 2:44 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಹೆಚ್ಚಿನ ಸಾವು–ನೋವುಗಳು ಸಂಭವಿಸುತ್ತಿವೆ. ಅಲ್ಲಿನ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ’ ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಆಡಳಿತವು ಅಗತ್ಯ ವೈದ್ಯಕೀಯ ಪರಿಹಾರಗಳ ಸಾಮಗ್ರಿಗಳನ್ನು ರವಾನಿಸುವ ಮೂಲಕ ಎಲ್ಲಾ ರೀತಿಯ ನೆರವನ್ನು ನೀಡುತ್ತಿದೆ ಎಂದು ಹ್ಯಾರಿಸ್ ಹೇಳಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಮೆರಿಕವು ಭಾರತೀಯರ ಜತೆ ನಿಲ್ಲುತ್ತದೆ. ಪ್ರಸ್ತುತ ಬಿಕ್ಕಟ್ಟನ್ನು ಎದುರಿಸಲು ಭಾರತಕ್ಕೆ ಸುಮಾರು 10 ಕೋಟಿ ಡಾಲರ್ ನೆರವು ನೀಡಲಾಗುತ್ತಿದೆ. ಪ್ರಸ್ತುತ ಬಿಕ್ಕಟ್ಟಿಗೆ ಸ್ಪಂದಿಸಲು ಅಮೆರಿಕವು ಭಾರತದ ಅಧಿಕಾರಿಗಳು ಮತ್ತು ಆರೋಗ್ಯ ತಜ್ಞರ ಜತೆ ನಿಕಟ ಸಂಪರ್ಕದಲ್ಲಿದೆ ಎಂದು ಶುಕ್ರವಾರ ಅಮೆರಿಕ ಸರ್ಕಾರದ ಪ್ರಕಟಣೆ ತಿಳಿಸಿದೆ.

ತೀವ್ರ ಸಂಕಷ್ಟಕ್ಕೀಡಾಗಿರುವ ಸೋಂಕಿತರ ಚಿಕಿತ್ಸೆಗಾಗಿ 1,25,000 ಸೀಶೆ ರೆಮ್‌ಡಿಸಿವಿರ್, ಆಮ್ಲಜನಕ ಕೊರತೆ ನೀಗಿಸುವ ಸಲುವಾಗಿ ಸುಮಾರು 1,500 ಆಮ್ಲಜನಕ ಸಿಲಿಂಡರ್‌ಗಳನ್ನು, 210 ಪಲ್ಸ್ ಆಕ್ಸಿಮೀಟರ್‌ಗಳನ್ನು ಕಳುಹಿಸಿಕೊಡಲಾಗಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗಾಗಿ ಸುಮಾರು 25 ಲಕ್ಷ ‘ಎನ್‌95’ ಮಾಸ್ಕ್‌ಗಳನ್ನೂ ಕಳುಹಿಸಿಕೊಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT