ಶನಿವಾರ, ಅಕ್ಟೋಬರ್ 1, 2022
20 °C

ರಷ್ಯಾ–ಉಕ್ರೇನ್‌ ಅಧ್ಯಕ್ಷರ ಭೇಟಿ ಸಾಧ್ಯತೆ ಸದ್ಯಕ್ಕೆ ಇಲ್ಲ: ರಷ್ಯಾ ಸ್ಪಷ್ಟನೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Prajavani

ಮಾಸ್ಕೊ: ಪ್ರಸ್ತುತ ಸಂದರ್ಭದಲ್ಲಿ ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರ ಭೇಟಿಗೆ ಯಾವುದೇ ಆಧಾರವಿಲ್ಲ ಎಂದು ರಷ್ಯಾ ಹೇಳಿದೆ.

ಶಾಂತಿ ಮಾತುಕತೆಯನ್ನು ಕೈಬಿಡಬೇಕು ಎಂಬ ಟರ್ಕಿಯ ಪ್ರಸ್ತಾವ ಕುರಿತ ಪ್ರಶ್ನೆಗೆ ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೊವ್ ಅವರು ಈ ಮಾತು ಹೇಳಿದರು.

ಆಯಾ ಹಂತದಲ್ಲಿ ಅಗತ್ಯ ಸಿದ್ಧತೆಗಳು ನಡೆದ ನಂತರವೇ ವ್ಲಾಡಿಮಿರ್ ಪುಟಿನ್ ಮತ್ತು ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರು ಭೇಟಿ ಸಾಧ್ಯ ಆಗಬಹುದು ಎಂದು ಹೇಳಿದರು.

ರಷ್ಯಾ ಮತ್ತು ಉಕ್ರೇನ್‌ನ ನಡುವೆ ಸೌಹಾರ್ದ ಮಾತುಕತೆ ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದೆ. ಪೂರಕ ಸಿದ್ಧತೆ ಕುರಿತಂತೆ ಉಭಯ ದೇಶಗಳು ಪರಸ್ಪರ ದೂಷಿಸುತ್ತಿರುವುದು ಇದಕ್ಕೆ ಕಾರಣ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು