ಭಾನುವಾರ, ಫೆಬ್ರವರಿ 28, 2021
31 °C

ಬೈಡನ್ ಪ್ರಮಾಣವಚನ ಸಮಾರಂಭದಲ್ಲಿ ಲೇಡಿ ಗಾಗಾ, ಜೆನ್ನಿಫರ್ ಲೋಫೆಜ್ ಕಾರ್ಯಕ್ರಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್‌ ಅವರ ಇದೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಖ್ಯಾತ ಪಾಪ್ ಕಲಾವಿದೆಯರಾದ ಜೆನ್ನಿಫರ್ ಲೋಪೆಜ್ ಮತ್ತು ಲೇಡಿ ಗಾಗಾ ಕಾರ್ಯಕ್ರಮ ನೀಡಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ವೆಸ್ಟ್‌ಫ್ರಂಟ್‌ನಲ್ಲಿ ಖ್ಯಾತ ಪಾಪ್ ಗಾಯಕಿ ಜೆನ್ನಿಫರ್ ಲೋಫೆಜ್ ಅವರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಲಿದ್ದಾರೆ. ಲೇಡಿ ಗಾಗಾ ಅಮೆರಿಕದ ರಾಷ್ಟ್ರಗೀತೆಯನ್ನು ಹಾಡಲಿದ್ದಾರೆ. ಬಹುತೇಕ ಈ ಕಾರ್ಯಕ್ರಮ ವರ್ಚುವಲ್ ರೂಪದಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಜ. 20ರಂದು ಜೋ ಬೈಡನ್ ಅಮೆರಿಕದ ಅಧ್ಯಕ್ಷರಾಗಿ, ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭದ್ರತೆಯ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಹುತೇಕ ಸರಳವಾಗಿ ನಡೆಯುವ ಸಾಧ್ಯತೆ ಇದೆ. ಕೊರೊನಾ ವೈರಸ್ ಸೋಂಕು ಹಾಗೂ ಶ್ವೇತಭವನಕ್ಕೆ ಟ್ರಂಪ್ ಪರ ಬೆಂಬಲಿಗರು ಮುತ್ತಿಗೆ ಹಾಕಿದ ಕಾರಣಕ್ಕಾಗಿ ಸಮಾರಂಭದಲ್ಲಿ ಕೆಲ ಬದಲಾವಣೆಗಳನ್ನೂ ಮಾಡಲಾಗಿದೆ. ಭದ್ರತಾ ವ್ಯವಸ್ಥೆಗಾಗಿ 10 ಸಾವಿರ ರಾಷ್ಟ್ರೀಯ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು