ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್ ಸಂಘರ್ಷ: ತಮ್ಮ ಗುರಿಗಳನ್ನು ಸಾಧಿಸಿಯೇ ತೀರುತ್ತೇವೆ: ಅಮೆರಿಕಕ್ಕೆ ರಷ್ಯಾ

Last Updated 30 ಜುಲೈ 2022, 2:38 IST
ಅಕ್ಷರ ಗಾತ್ರ

ಮಾಸ್ಕೊ: ಉಕ್ರೇನ್‌ನಲ್ಲಿನ ಸದ್ಯದ ಪರಿಸ್ಥಿತಿ ಕುರಿತಂತೆ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ದೂರವಾಣಿ ಮೂಲಕ ಚರ್ಚಿಸಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಸದ್ಯ, ಉಕ್ರೇನ್‌ನಲ್ಲಿ ನಡೆಯುತ್ತಿರುವ ವಿಶೇಷ ಮಿಲಿಟರಿ ಕಾರ್ಯಾಚರಣೆಯ ಕುರಿತಂತೆ ರಷ್ಯಾದ ವಾದವನ್ನು ಲಾವ್ರೊವ್ ಮಂಡಿಸಿದರು. ತಮ್ಮ ಗುರಿಗಳನ್ನು ಸಾಧಿಸಿಯೇ ತೀರುತ್ತೇವೆ ಎಂಬುದಾಗಿ ಒತ್ತಿ ಹೇಳಿದ್ದಾರೆ ಎಂದೂ ಹೇಳಿಕೆ ತಿಳಿಸಿದೆ.

ಅವರು ಜಾಗತಿಕ ಆಹಾರ ಭದ್ರತೆ ಮತ್ತು ದ್ವಿಪಕ್ಷೀಯ ಸಂಬಂಧಗಳ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಾಗತಿಕ ಸಮುದಾಯಗಳ ವಿರೋಧದ ನಡುವೆಯೂ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿದೆ. ಆಮದು, ಹಣಕಾಸು ಮತ್ತು ತೈಲ ನಿರ್ಬಂಧಗಳ ನಡುವೆಯೂ ರಷ್ಯಾ ತನ್ನ ಪಟ್ಟುಬಿಡುತ್ತಿಲ್ಲ.

ಈ ನಡುವೆ ರಷ್ಯಾ ಆಕ್ರಮಿತ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ 50ಕ್ಕೂ ಹೆಚ್ಚು ಉಕ್ರೇನ್ ಯುದ್ಧ ಕೈದಿಗಳ ಸಾವಿನ ಬಗ್ಗೆ ತನಿಖೆ ನಡೆಸಲು ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್‌ ತನಿಖೆ ನಡೆಸಬೇಕೆಂದು ಉಕ್ರೇನ್ ಒತ್ತಾಯಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಚಿಕಿತ್ಸೆ ನೀಡಲು ಸಹಾಯ ಮಾಡುವ ಸಲುವಾಗಿ ಜೈಲಿಗೆ ಪ್ರವೇಶಕ್ಕೆ ಅನುಮತಿ ಕೇಳಿರುವುದಾಗಿ ಎಂದು ರೆಡ್ ಕ್ರಾಸ್ ಹೇಳಿದೆ.

ಗುರುವಾರ ಜೈಲಿನ ಮೇಲೆ ನಡೆದ ಕ್ಷಿಪಣಿ ದಾಳಿ ಬಗ್ಗೆ ಉಕ್ರೇನ್ ಮತ್ತು ರಷ್ಯಾ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿವೆ.

ರಷ್ಯಾದ ಬೆಂಬಲಿತ ಪ್ರತ್ಯೇಕತಾವಾದಿಗಳ ಹಿಡಿತದಲ್ಲಿರುವ ಡೊನೆಟ್ಸ್‌ಸ್ಕ್‌ ಪೀಪಲ್ಸ್ ರಿಪಬ್ಲಿಕ್‌ನಿಂದ ನಿಯಂತ್ರಿಸಲ್ಪಡುವ ಒಲೆನಿವ್ಕಾದ ಜೈಲು ಶಿಬಿರದಲ್ಲಿ ನಿಖರವಾಗಿ ಏನಾಯಿತು ಎಂಬುದು ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT