ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್‌:ತಿಂಗಳಾಂತ್ಯದಲ್ಲಿ ಲಾಕ್‌ಡೌನ್ ತೆರವು, ನಾಳೆಯಿಂದ ನಿರ್ಬಂಧ ಸಡಿಲಿಕೆ

Last Updated 8 ನವೆಂಬರ್ 2021, 6:04 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಳೆದ ಮೂರು ತಿಂಗಳಿನಿಂದ ನ್ಯೂಜಿಲೆಂಡ್‌ನ ಆಕ್ಲಾಂಡ್‌ ನಗರದಲ್ಲಿ ವಿಧಿಸಿದ್ದ ಲಾಕ್‌ಡೌನ್‌ ನಿರ್ಬಂಧಗಳನ್ನು ಈ ತಿಂಗಳಾಂತ್ಯಕ್ಕೆ ಅಂತ್ಯಗೊಳಿಸುವ ಸಾಧ್ಯತೆ ಇದ್ದು, ಇದಕ್ಕೆ ಪೂರ್ವಭಾವಿಯಾಗಿ ಮಂಗಳವಾರದಿಂದ ನಗರದಲ್ಲಿ ಕೆಲವೊಂದು ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ ಎಂದು ಪ್ರಧಾನಿ ಜಸಿಂದಾ ಅರ್ಡೆರ್ನ್ ತಿಳಿಸಿದ್ದಾರೆ.

ಆಕ್ಲಾಂಡ್‌ ನಗರದಲ್ಲಿ ಕಳೆದ ವಾರದವರೆಗೂ ನಿತ್ಯ 150 ಹೊಸ ಕೋವಿಡ್‌–19 ಸಾಂಕ್ರಾಮಿಕದ ಡೆಲ್ಟಾ ರೂಪಾಂತರ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಒಟ್ಟು ಸೋಂಕಿನ ಸಂಖ್ಯೆ 4500ಕ್ಕೆ ಏರಿತ್ತು.

’ನಗರದಲ್ಲಿ ಕೋವಿಡ್‌ ಲಸಿಕೆ ಹಾಕುವ ಪ್ರಕ್ರಿಯೆ ಸುಧಾರಿಸಿದೆ. ಶೇ 90ರಷ್ಟು ಮೊದಲ ಡೋಸ್‌ ಮತ್ತು ಶೇ 80ರಷ್ಟು ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ವಾರಾಂತ್ಯದಲ್ಲಿ ಎರಡು ಡೋಸ್ ಲಸಿಕೆ ಪಡೆದವರ ಪ್ರಮಾಣ ಶೇ 90ರಷ್ಟಾಗುತ್ತದೆ. ಲಸಿಕೆ ನೀಡಿಕೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ತೆರವುಗೊಳಿಸಲು ಸಿದ್ಧತೆ ನಡೆಸಿದ್ದೇವೆ’ ಎಂದು ಜೆಸಿಂದಾ ತಿಳಿಸಿದ್ದಾರೆ.

’ಮಂಗಳವಾರದಿಂದ ಆಕ್ಲಾಂಡ್‌ನಲ್ಲಿ ರಿಟೇಲ್ ಮಳಿಗೆಗಳು ಮತ್ತು ಮಾಲ್‌ಗಳು ಪುನರಾರಂಭಗೊಳ್ಳುತ್ತವೆ. ಜೊತೆಗೆ ಗ್ರಂಥಾಲಯಗಳು, ವಸ್ತು ಸಂಗ್ರಹಾಲಯ ಮತ್ತು ಪ್ರಾಣಿಸಂಗ್ರಹಾಲಯಗಳೂ ಆರಂಭವಾಗುತ್ತಿವೆ. ಹೊರಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 10 ರಿಂದ 25 ಮಂದಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಜಿಮ್, ಚಿತ್ರಮಂದಿರಗಳನ್ನು ಆರಂಭಿಸಲು ಅವಕಾಶ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT