ಗುರುವಾರ , ಸೆಪ್ಟೆಂಬರ್ 23, 2021
22 °C

ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಪ್ರಯತ್ನ: ನೇಪಾಳದ ನೂತನ ಅಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಠ್ಮಂಡು: ನೆರೆಯ ರಾಷ್ಟ್ರಗಳೊಂದಿಗಿನ ಬಾಂಧವ್ಯ ವೃದ್ಧಿ ಹಾಗೂ ರಾಷ್ಟ್ರಗಳ ಪ್ರಜೆಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇನ್ನಷ್ಟು ನಿಕಟವಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ನೇಪಾಳದ ನೂತನ ಅಧ್ಯಕ್ಷ ಶೇರ್‌ ಬಹದ್ದೂರ್ ದೇವುಬಾ ಹೇಳಿದ್ದಾರೆ.   

ನೇಪಾಳದ ಸಂಸತ್ತಿನ ಕೆಳಮನೆಯಲ್ಲಿ ಭಾನುವಾರ ವಿಶ್ವಾಸ ಮತ ಪಡೆಯುವಲ್ಲಿ ಶೇರ್‌ ಬಹದ್ದೂರ್ ದೇವುಬಾ ಗೆಲುವು ಸಾಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ, ಟ್ವೀಟ್‌ ಮೂಲಕ ದೇವುಬಾ ಅವರನ್ನು ಅಭಿನಂದಿಸಿದರು.

’ದೇವುಬಾ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಲಿ, ಶುಭಾಶಯಗಳು. ಉಭಯ ರಾಷ್ಟ್ರಗಳಲ್ಲಿನ ಎಲ್ಲಾ ಕ್ಷೇತ್ರಗಳಲ್ಲಿನ ನಮ್ಮ ಸಹಭಾಗಿತ್ವವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಜನರ ನಡುವಿನ ಸಂಬಂಧಗಳನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ’ ಎಂದು ಮೋದಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೋದಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ದೇವುಬಾ ’ನಿಮ್ಮ ಅಭಿನಂದನಾ ಸಂದೇಶಕ್ಕಾಗಿ ಧನ್ಯವಾದಗಳು. ನಾನೂ ಕೂಡ ನೆರೆಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ನಿಮ್ಮೊಂದಿಗೆ ಇನ್ನಷ್ಟು ನಿಕಟವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು