ಗುರುವಾರ , ಮಾರ್ಚ್ 4, 2021
26 °C

ಅಮೆರಿಕದ ನೂತನ ಸರ್ಕಾರದೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ: ಭಾರತೀಯ ರಾಯಭಾರಿ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕದ ಸಂಬಂಧವು ಒಂದೇ ರೀತಿಯ ಮೌಲ್ಯಗಳ ಮೇಲೆ ನಿರ್ಮಾಣವಾಗಿದೆ. ಜೋ ಬೈಡನ್‌ ನೇತೃತ್ವದ ಸರ್ಕಾರದೊಂದಿಗೆ ಕೆಲಸ ಮಾಡಲು ಭಾರತ ಎದುರು ನೋಡುತ್ತಿದೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ತರಂಜಿತ್‌ ಸಿಂಗ್‌ ಸಂಧು ಹೇಳಿದರು.

72ನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು,‘ ಭಾರತೀಯ– ಅಮೆರಿಕನ್‌ ಸಮುದಾಯವು ಅಮೆರಿಕದೊಂದಿಗಿನ ಭಾರತದ ಸಂಬಂಧದ ಆಧಾರ ಸ್ತಂಭ. ಭಾರತ ಮತ್ತು ಅಮೆರಿಕದ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವಲ್ಲಿ ಈ ಸಮುದಾಯವು  ಪ್ರಮುಖ ಪಾತ್ರವಹಿಸಿದೆ’ ಎಂದು ಅವರು ಹೇಳಿದರು.

‘ಅಧ್ಯಕ್ಷ ಜೋ ಬೈಡನ್‌ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ನೇತೃತ್ವದ ನೂತನ ಸರ್ಕಾರದೊಂದಿಗೆ ಕೆಲಸ ಮಾಡಲು ನಾವು ಉತ್ಸುಕರಾಗಿದ್ದೇವೆ’ ಎಂದು ಅವರು ತಿಳಿಸಿದರು.

‘ಭಾರತ ಮತ್ತು ಅಮೆರಿಕವು ಪ್ರಜಾ‍ಪ್ರಭುತ್ವ, ಕಾನೂನು ಮತ್ತು ಬಹುತ್ವಗಳಂತಹ ಮೌಲ್ಯಗಳನ್ನು ಅನುಸರಿಸುತ್ತದೆ. ಇದೇ ಉಭಯ ರಾಷ್ಟ್ರಗಳ ಸಂಬಂಧದ ಅಡಿಪಾಯ. ಬಾಹ್ಯಾಕಾಶ, ನ್ಯಾನೊ ತಂತ್ರಜ್ಞಾನ, ಇಂಡೊ-ಪೆಸಿಫಿಕ್, ಹವಾಮಾನ ಬದಲಾವಣೆ, ಆರೋಗ್ಯ, ಶಿಕ್ಷಣ ಮತ್ತು ಐಟಿ ಕ್ಷೇತ್ರಗಳಲ್ಲಿ ಅಮೆರಿಕ ಮತ್ತು ಭಾರತದ ಸಹಭಾಗಿತ್ವವು ಕೇವಲ ಎರಡು ರಾಷ್ಟ್ರಗಳಿಗೆ ಮಾತ್ರವಲ್ಲದೇ ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಿದೆ’ ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು