ಶುಕ್ರವಾರ, ಜನವರಿ 27, 2023
27 °C

ಜಿ–20 ಅಧ್ಯಕ್ಷ ಭಾರತದ ಪ್ರಯತ್ನಕ್ಕೆ ಬೆಂಬಲ: ಅಮೆರಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಆಹಾರ ಮತ್ತು ಇಂಧನ ಭದ್ರತೆ ಸಹಿತ ಹಲವು ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಜಿ–20 ಅಧ್ಯಕ್ಷತೆ ವಹಿಸಿಕೊಂಡಿರುವ ಭಾರತಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ಶ್ವೇತಭವನ ತಿಳಿಸಿದೆ.

ಜಿ–20 ಗುಂಪಿನ ಅಧ್ಯಕ್ಷತೆಯನ್ನು ಗುರುವಾರ ಭಾರತ ವಹಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಪುಟಿದೇಳಬಲ್ಲ ಜಾಗತಿಕ ಆರ್ಥಿಕತೆಯನ್ನು ಕಟ್ಟುವ ಪ್ರಯತ್ನದಲ್ಲಿ ನಮ್ಮ ಪ್ರಯತ್ನ ಮುಂದುವರಿಯಲಿದೆ. ಆಹಾರ, ಇಂಧನ ಭದ್ರತೆಯಂತಹ ಸದ್ಯದ ಸವಾಲುಗಳ ವಿಚಾರದಲ್ಲೂ ಜಿ–20 ಅಧ್ಯಕ್ಷತೆ ವಹಿಸಿರುವ ಭಾರತಕ್ಕೆ ಬೆಂಬಲವಾಗಿ ನಿಲ್ಲುವುದನ್ನು ನಾವು ಎದುರು ನೋಡುತ್ತಿದ್ದೇವೆ’ ಎಂದು ಅವರು ತಿಳಿಸಿದರು.

ಜಿ–20 ಗುಂಪಿನ ರಾಷ್ಟ್ರಗಳು ಜಗತ್ತಿನ ಜಿಡಿಪಿಯ ಶೇ 80ರಷ್ಟು, ಅಂತರರಾಷ್ಟ್ರೀಯ ವ್ಯಾಪಾರದ ಶೇ 75ರಷ್ಟು ಹಾಗೂ ಒಟ್ಟಾರೆ ಜನಸಂಖ್ಯೆಯ ಮೂರನೇ ಎರಡರಷ್ಟು ಭಾಗವನ್ನು ಹೊಂದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು