ಸೋಮವಾರ, ಮಾರ್ಚ್ 20, 2023
30 °C

ಲಕ್ಸೆಂಬರ್ಗ್ ಪ್ರಧಾನಿಗೆ ಕೋವಿಡ್‌: ಆಸ್ಪತ್ರೆಗೆ ದಾಖಲು

ಎಪಿ Updated:

ಅಕ್ಷರ ಗಾತ್ರ : | |

Prajavani

ಬ್ರುಸೆಲ್ಸ್: ಲಕ್ಸೆಂಬರ್ಗ್ ಪ್ರಧಾನಿ ಕ್ಸೇವಿಯರ್ ಬೆಟ್ಟೆಲ್ ಅವರಿಗೆ ಕೋವಿಡ್–19 ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬೆಟ್ಟೆಲ್ ಅವರು ಯುರೋಪಿಯನ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಕೋವಿಡ್ ಪರೀಕ್ಷೆಗೊಳಪಟ್ಟಿದ್ದರು. ನಂತರ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಆರಂಭಿಕ ಹಂತದಲ್ಲಿ ಅವರಿಗೆ ಸೌಮ್ಯಪ್ರಮಾಣದ ರೋಗಲಕ್ಷಣಗಳಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಲ್ಲಿನ ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಎರಡು ದಿನಗಳ ಕಾಲ ನಡೆದ ಯುರೋಪಿಯನ್ ಶೃಂಗಸಭೆಯಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು’ ಎಂದು ಸಭೆಯ ಸಂಘಟಕರು ತಿಳಿಸಿದ್ದಾರೆ. ಬೆಟ್ಟೆಲ್ ಅವರನ್ನು ಹೊರತುಪಡಿಸಿ, ಸಭೆಯಲ್ಲಿ ಭಾಗವಹಿಸಿದ ಇತರರಿಗೆ ಕೋವಿಡ್ ದೃಢಪಟ್ಟ ವರದಿಯಾಗಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು