ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ಏಮ್ಸ್‌ ನಿರ್ದೇಶಕರಾಗಿ ಎಂ.ಶ್ರೀನಿವಾಸ್‌ ನೇಮಕ

Last Updated 23 ಸೆಪ್ಟೆಂಬರ್ 2022, 13:51 IST
ಅಕ್ಷರ ಗಾತ್ರ

ನವದೆಹಲಿ: ಹೈದರಾಬಾದ್‌ನ ಇಎಸ್‌ಐಸಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ಡೀನ್‌ ಎಂ.ಶ್ರೀನಿವಾಸ್‌ ಅವರನ್ನು ದೆಹಲಿಯ ಏಮ್ಸ್‌ ನಿರ್ದೇಶಕರನ್ನಾಗಿ ನೇಮಕಗೊಳಿಸಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

2017ರಿಂದ ಏಮ್ಸ್‌ ನಿರ್ದೇಶಕರಾಗಿದ್ದ ರಣದೀಪ್‌ ಗುಲೇರಿಯಾ ಅವರ ಸ್ಥಾನಕ್ಕೆ ಡಾ.ಶ್ರೀನಿವಾಸ್‌ ಅವರನ್ನು ನೇಮಕ ಮಾಡಲಾಗಿದೆ.

ಶ್ರೀನಿವಾಸ್‌ ಅವರು, ಇಎಸ್‌ಐಸಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಸೇವೆ ಸಲ್ಲಿಸುವ ಮೊದಲು, ದೆಹಲಿಯ ಏಮ್ಸ್‌ನಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕರಾಗಿದ್ದರು.ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಗುಲೇರಿಯಾ ಅವರನ್ನು 2017 ಮಾರ್ಚ್‌ 28ರಂದು ಏಮ್ಸ್‌ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ಅಧಿಕಾರ ಅವಧಿ ಮುಗಿದ ಬಳಿಕ ಎರಡು ಬಾರಿ ತಲಾ ಮೂರು ತಿಂಗಳಂತೆ ಅವಧಿ ವಿಸ್ತರಿಸಲಾಗಿತ್ತು. ಇವರ ಅಧಿಕಾರ ಅವಧಿ ಶುಕ್ರವಾರ ಮುಕ್ತಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT