ಶುಕ್ರವಾರ, ಡಿಸೆಂಬರ್ 9, 2022
21 °C

ವಿಶ್ವಸಂಸ್ಥೆಯಲ್ಲಿ ಗಾಂಧಿ ಹಾಲೊಗ್ರಾಮ್‌ ಪ್ರದರ್ಶನ

ಪಿಟಿಐ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಮಹಾತ್ಮಾ ಗಾಂಧಿ ಅವರ ಪೂರ್ಣ ವ್ಯಕ್ತಿಚಿತ್ರವನ್ನು ಹಾಲೊಗ್ರಾಮ್‌ ಮೂಲಕ ಪ್ರದರ್ಶಿಸಿ, ಶಿಕ್ಷಣ ಕುರಿತ ಅವರ ಚಿಂತನೆಗಳನ್ನು ಪ್ರಸಾರ ಮಾಡಲಾಯಿತು.

ಗಾಂಧಿ ಜಯಂತಿ ನಿಮಿತ್ತ, ಅಂತರರಾಷ್ಟ್ರೀಯ ಅಂಹಿಸೆ ದಿನಾಚರಣೆ ಅಂಗವಾಗಿ ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಮಿಷನ್ ಹಾಗೂ ಯುನೆಸ್ಕೊದ ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯು (ಎಂಜಿಐಇಪಿ) ಕಾರ್ಯಕ್ರಮ ಆಯೋಜಿಸಿತ್ತು.

ಗಾಂಧಿ ಜಯಂತಿ ದಿನವನ್ನು ಅಂತರರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸಲಾಗುತ್ತದೆ. ‘ಮಾನವನ ಏಳಿಗೆಗಾಗಿ ಶಿಕ್ಷಣ’ ವಿಷಯ ಕುರಿತು ಚರ್ಚೆ ನಡೆಯಿತು. ಹಾಲೊಗ್ರಾಮ್‌ ಮೂಲಕ ಇದೇ ಮೊದಲ ಬಾರಿಗೆ ಗಾಂಧಿ ಚಿತ್ರವನ್ನು ಪ್ರದರ್ಶಿಸಲಾಯಿತು ಎಂದು ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು