ನ್ಯೂಯಾರ್ಕ್: ಗಾಂಧಿ ಪ್ರತಿಮೆಗೆ ಹಾನಿ

ನ್ಯೂಯಾರ್ಕ್: ಇಲ್ಲಿನ ಮ್ಯಾನ್‌ಹಟನ್‌ನಲ್ಲಿರುವ ಯೂನಿಯನ್ ಸ್ಕ್ವಾರ್‌ನಲ್ಲಿ ಸ್ಥಾಪಿಸಲಾಗಿದ್ದ ಮಹಾತ್ಮ ಗಾಂಧಿ ಅವರ ಆಳೆತ್ತರದ ಪ್ರತಿಮೆಯನ್ನು ದುಷ್ಕರ್ಮಿಗಳು ಶನಿವಾರ ವಿರೂಪಗೊಳಿಸಿದ್ದಾರೆ.
‘ಇದೊಂದು ಹೇಯ ಕೃತ್ಯವಾಗಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅಮೆರಿಕದ ವಿದೇಶಾಂಗ ಇಲಾಖೆಯನ್ನು ಕೇಳಿಕೊಳ್ಳಲಾಗಿದೆ‘ ಎಂದು ಭಾರತೀಯ ಕಾನ್ಸುಲೇಟ್ ಜನರಲ್ ಹೇಳಿಕೆಯಲ್ಲಿ ತಿಳಿಸಿದೆ. ಹಲವಾರು ಸಂಘಟನೆಗಳು, ಸಂಘ ಸಂಸ್ಥೆಗಳೂ ಈ ಘಟನೆಗೆ ಆಕ್ಷೇಪ ವ್ಯಕ್ತಪಡಿಸಿವೆ.
8 ಅಡಿ ಎತ್ತರದ ಈ ಪ್ರತಿಮೆಯನ್ನು ಗಾಂಧಿ ಮೆಮೋರಿಯಲ್ ಇಂಟರ್‌ನ್ಯಾಷನಲ್ ಫೌಂಡೇಷನ್ ದೇಣಿಗೆಯಾಗಿ ನೀಡಿತ್ತು ಹಾಗೂ ಮಹಾತ್ಮನ 117ನೇ ಜನ್ಮದಿನದ ಅಂಗವಾಗಿ 1986ರ ಅಕ್ಟೋಬರ್ 2ರಂದು ಇಲ್ಲಿ ಸ್ಥಾಪಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.