ವಾಷಿಂಗ್ಟನ್: ಅಮೆರಿಕದ ಕ್ಯಾಲಿರ್ಪೋನಿಯಾದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೆಲವು ಕಿಡಿಗೇಡಿಗಳು ಇತ್ತೀಚೆಗೆ ಧ್ವಂಸಗೊಳಿಸಿದ್ದಾರೆ. ಇದಕ್ಕೆ ಭಾರತೀಯ ಮೂಲದ ಅಮೆರಿಕನ್ನರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

‘ಉತ್ತರ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್‌ನಲ್ಲಿರುವ ಗಾಂಧೀಜಿ ಅವರ 6 ಅಡಿ ಎತ್ತರದ, 294 ಕೆ.ಜಿ ತೂಕದ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಪ್ರತಿಮೆಯ ಪಾದ ಮತ್ತು ಮುಖ ಭಾಗಕ್ಕೆ ಹಾನಿಯನ್ನುಂಟು ಮಾಡಲಾಗಿದೆ’ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಸದ್ಯ ಈ ಪ್ರತಿಮೆಯನ್ನು ಅಲ್ಲಿಂದ ತೆಗೆಯಲಾಗಿದ್ದು, ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ’ ಎಂದು ಡೇವಿಸ್ ನಗರ ಸ್ಥಳೀಯ ಆಡಳಿತದ ಸದಸ್ಯ ಲೂಕಸ್ ಫ್ರೀರಿಚ್ಸ್ ಮಾಹಿತಿ ನೀಡಿದ್ದಾರೆ.

‘ಈ ಪ್ರತಿಮೆಯು ಡೇವಿಸ್ ನಗರದ ಸಂಸ್ಕೃತಿಯ ಒಂದು ಭಾಗವಾಗಿದೆ. ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದೇವೆ’ ಎಂದು ಡೇವಿಸ್ ಪೊಲೀಸ್ ಇಲಾಖೆಯ ಉಪ ಮುಖ್ಯಸ್ಥ ಪೌಲ್ ಡೊರೊಶಾವ್ ಅವರು ಹೇಳಿದ್ದಾರೆ.

‘ಜನವರಿ 27ರಂದು ಧ್ವಂಸಗೊಂಡಿರುವ ಗಾಂಧಿ ಪ್ರತಿಮೆ ಪತ್ತೆಯಾಗಿತ್ತು. ಈ ಬಗ್ಗೆ ಪಾರ್ಕ್‌ನ ಸಿಬ್ಬಂದಿ ಮಾಹಿತಿ ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.