ಮಂಗಳವಾರ, ಮೇ 18, 2021
24 °C

ಈ ವರ್ಷಾಂತ್ಯದವರೆಗೆ ವಿದೇಶಿ ಪ್ರವಾಸಿಗರ ಮೇಲೆ ನಿರ್ಬಂಧ ವಿಧಿಸಿದ ಮಲೇಷ್ಯಾ

ಎಪಿ Updated:

ಅಕ್ಷರ ಗಾತ್ರ : | |

ಕ್ವಾಲಾಲಂಪುರ: ಮಲೇಷ್ಯಾ ಸರ್ಕಾರವು ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಿದೇಶಿ ಪ್ರವಾಸಿಗರ ಮೇಲಿನ ನಿರ್ಬಂಧವನ್ನು ಮುಂದುವರಿಸಿದೆ.

ಇದರನ್ವಯ ಈ ವರ್ಷದ ಅಂತ್ಯದವರೆಗೂ ಯಾರೂ ಮಲೇಷ್ಯಾ ಪ್ರವೇಶಿಸುವಂತಿಲ್ಲ.

‘ಜಗತ್ತಿನೆಲ್ಲೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ನಮ್ಮ ರಾಷ್ಟ್ರದಲ್ಲಿ ಈ ಸಂಖ್ಯೆ ಕಡಿಮೆ ಇದೆ. ಶಾಲೆ ಹಾಗೂ ವಾಣಿಜ್ಯ ಚಟುವಟಿಕೆಗಳು ಪುನರಾರಂಭವಾಗಿವೆ. ನೈಟ್‌ ಕ್ಲಬ್‌, ಮನರಂಜನಾ ಕೇಂದ್ರಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ. ಅಂತರರಾಷ್ಟ್ರೀಯ ಕ್ರೀಡಾ ಚಟುವಟಿಕೆಗಳಿಗೂ ಅವಕಾಶ ಇಲ್ಲ. ಗಡಿಯನ್ನೂ ಮುಚ್ಚಲಾಗಿದೆ’ ಎಂದು ಮಲೇಷ್ಯಾದ ಪ್ರಧಾನ ಮಂತ್ರಿ ಮುಹುಯಿದ್ದೀನ್‌ ಯಾಸಿನ್‌ ಅವರು ಶುಕ್ರವಾರ ತಿಳಿಸಿದ್ದಾರೆ.

ಮಲೇಷ್ಯಾದಲ್ಲಿ ಇದುವರೆಗೂ 9000ಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. 125 ಮಂದಿ ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು