ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಷ್ಯಾ ಪ್ರಧಾನಿ ಆರೋಗ್ಯ ಸ್ಥಿರ; ಶೀಘ್ರವೇ ಆಸ್ಪತ್ರೆಯಿಂದ ಮನೆಗೆ

ಪ್ರಧಾನಿ ಕಾರ್ಯಾಲಯದ ಪ್ರಕಟಣೆ
Last Updated 4 ಜುಲೈ 2021, 8:27 IST
ಅಕ್ಷರ ಗಾತ್ರ

ಕೌಲಾಲಂಪುರ: ಜೀರ್ಣಾಂಗ ವ್ಯವಸ್ಥೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಮಲೇಷ್ಯಾ ಪ್ರಧಾನಿ ಮೊಯಿದ್ದೀನ್ ಯಾಸಿನ್ ಅವರ ಆರೋಗ್ಯದಲ್ಲಿ ತುಸು ಸುಧಾರಣೆ ಕಾಣುತ್ತಿದ್ದು, ‌ಅವರು ಶೀಘ್ರದಲ್ಲೇ ಆಸ್ಪತ್ರೆಯಿಂದ ಮನೆಗೆ ತೆರಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಅತಿಸಾರ ಸಮಸ್ಯೆಯಿಂದಾಗಿ ಮೊಯಿದ್ದೀನ್ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಇಂಟ್ರೀವನಸ್‌ ಆಂಟಿಬಯೋಟಿಕ್‌ ಚಿಕಿತ್ಸೆ ನೀಡಲಾಗಿದ್ದು, ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿರಬೇಕು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ತಂಡ ಸಲಹೆ ನೀಡಿತ್ತು.

‘ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ಕೆಲವೇ ದಿನಗಳಲ್ಲಿ ಮನೆಗೆ ತೆರಳುವ ನಿರೀಕ್ಷೆ ಇದೆ‘ ಎಂದು ಪ್ರಧಾನಿ ಕಚೇರಿಯ ಪ್ರಕಟಣೆ ತಿಳಿಸಿದೆ.

2018ರಲ್ಲಿ ಮೊಹಿದ್ದೀನ್ ಅವರು ಮೇದೋಜೀರಕ ಗ್ರಂಥಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆಯ ನಂತರ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದು ಪ್ರಕಟಿಸಲಾಗಿತ್ತು.

‘ಈಗ ಅವರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಕ್ಯಾನ್ಸರ್‌ ಮರುಕಳಿಸಿರುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ‘ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT