ಸೋಮವಾರ, ಸೆಪ್ಟೆಂಬರ್ 27, 2021
26 °C
ರಾಜಕೀಯ ಮುಖಂಡರನ್ನು ಭೇಟಿಯಾಗಲು ರಾಜನ ಸಿದ್ಧತೆ

ಮಲೇಷ್ಯಾದಲ್ಲಿ ಹೊಸ ಪ್ರಧಾನಿಗಾಗಿ ಹುಡುಕಾಟ

ಎಪಿ Updated:

ಅಕ್ಷರ ಗಾತ್ರ : | |

Prajavani

ಕ್ವಾಲಾಲಂಪುರ: ಪ್ರಧಾನಿ ಮುಹಿದ್ದೀನ್‌ ಯಾಸೀನ್‌ ರಾಜೀನಾಮೆ ನೀಡಿದ ನಂತರ, ಮಲೇಷ್ಯಾದ ರಾಜ ಕೊರೊನಾ ಸಾಂಕ್ರಾಮಿದ ನಡುವೆ ಹೊಸ ಪ್ರಧಾನಿಯ ಹುಡುಕಾಟದಲ್ಲಿ ತೊಡಗಿದ್ದು, ಈ ಸಂಬಂಧ ಮಂಗಳವಾರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿಯಾಗಲು ಸಜ್ಜಾಗಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಪ್ರಧಾನಿ ಮುಹಿದ್ದೀನ್ ಯಾಸೀನ್ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರು. 

ಏಳು ತಿಂಗಳ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ ಮತ್ತು ಜೂನ್‌ ತಿಂಗಳಿನಿಂದ ಲಾಕ್‌ಡೌನ್‌ ಘೋಷಣೆಯಾಗಿದ್ದರೂ, ಪ್ರತಿ ನಿತ್ಯ 20 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದವು. ಈ ಮೂಲಕ ಮಲೇಷ್ಯಾ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕು ಹಾಗೂ ಸಾವಿನ ಪ್ರಕರಣಗಳು ದಾಖಲಾಗುತ್ತಿರುವ ರಾಷ್ಟ್ರವಾಗಿತ್ತು.

ದೇಶದ ಹಲವು ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆರೋಗ್ಯ ಸೌಲಭ್ಯಗಳ ಕೊರತೆಯಿರುವ ಕಾರಣ, ಸದ್ಯಕ್ಕೆ ಸಾರ್ವತ್ರಿಕ ಚುನಾವಣೆ ನಡೆಸುವ ವಿಚಾರವನ್ನು ರಾಜ ತಳ್ಳಿ ಹಾಕಿದ್ದಾರೆ. ದೇಶಕ್ಕೆ ಉತ್ತರಾಧಿಕಾರಿ ಬರುವವರೆಗೂ ಮುಹಿದ್ದೀನ್ ಯಾಸೀನ್ ಅವರನ್ನೇ ಹಂಗಾಮಿ ಪ್ರಧಾನಿಯನ್ನಾಗಿ ನೇಮಿಸಲಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು