ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ಭಾರಿ ಮಳೆ: ಮೆಟ್ರೊ ಸುರಂಗ ಮಾರ್ಗಕ್ಕೆ ನುಗ್ಗಿದ ನೀರು, 12 ಮಂದಿ ಸಾವು

Last Updated 21 ಜುಲೈ 2021, 3:24 IST
ಅಕ್ಷರ ಗಾತ್ರ

ಬೀಜಿಂಗ್: ಭಾರಿ ಮಳೆಯಿಂದಾಗಿ ಚೀನಾದ ಝೆಂಗ್‌ಝೊ ನಗರದ ಮೆಟ್ರೊ ಸುರಂಗ ಮಾರ್ಗದಲ್ಲಿ ಪ್ರವಾಹ ಉಂಟಾಗಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಕಾಏಕಿ ಸುರಿದ ಮಳೆಯಿಂದಾಗಿ ಮೆಟ್ರೊ ಸುರಂಗ ಮಾರ್ಗದಲ್ಲಿ ನೀರು ನುಗ್ಗಿದ್ದು, ಪ್ರವಾಹ ಸ್ಥಿತಿ ಉಂಟಾಗಿತ್ತು. ಇದರಿಂದ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲಿನಲ್ಲಿದ್ದ ಪ್ರಯಾಣಿಕರು ರಕ್ಷಿಸುವಂತೆ ಕೂಗಾಡುತ್ತಿರುವ ವಿಡಿಯೊ, ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಬೀಜಿಂಗ್ ಹಾಗೂ ಹೆನಾನ್ ಪ್ರಾಂತ್ಯದಲ್ಲಿ ಕಳೆದ ಕೆಲ ದಿನಗಳಿಂದ ದಾಖಲೆ ಪ್ರಮಾಣದ ಮಳೆಯಾಗುತ್ತಿದ್ದು, ಇದುವರೆಗೆ 1 ಕೋಟಿಗೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಜತೆಗೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಈ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದ್ದು, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿವೆ. ಜತೆಗೆ, ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ, ಆಸ್ತಿಪಾಸ್ತಿ ನಾಶವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT