ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿ; ಆಸ್ಪತ್ರೆ ಆವರಣದಲ್ಲಿ 5 ಮಂದಿ ಸಾವು

Last Updated 2 ಜೂನ್ 2022, 2:06 IST
ಅಕ್ಷರ ಗಾತ್ರ

ಓಕ್ಲಹೋಮಾ: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಬಂದೂಕು ಹಿಡಿದು ಬಂದ ವ್ಯಕ್ತಿಯೊಬ್ಬ ಆಸ್ಪತ್ರೆಯ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ್ದು, ನಾಲ್ಕು ಮಂದಿ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.

ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್‌ ಫ್ರಾನ್ಸಿಸ್‌ ಆಸ್ಪತ್ರೆಯಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಕೋರ ಸಹ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಆಸ್ಪತ್ರೆ ಕಟ್ಟಡದ ಎರಡನೇ ಮಹಡಿಯಲ್ಲಿ ವ್ಯಕ್ತಿಯೊಬ್ಬ ಬಂದೂಕು ಹಿಡಿದಿರುವ ಬಗ್ಗೆ ಕರೆ ಬಂದಿತ್ತು. ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಕೆಲವು ಜನರ ಮೇಲೆ ಗುಂಡಿನ ದಾಳಿ ನಡೆದಿತ್ತು. ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಂತಕನ ಬಳಿ ದೊಡ್ಡ ರೈಫಲ್‌ ಮತ್ತು ಪಿಸ್ತೂಲ್‌ ಇತ್ತು ಎಂದಿದ್ದಾರೆ.

ಮೇ ತಿಂಗಳು ಅಮೆರಿಕದಲ್ಲಿ ನಡೆದ ಎರಡು ದೊಡ್ಡ ಸಾಮೂಹಿಕ ಗುಂಡಿನ ದಾಳಿಗಳ ಬೆನ್ನಲ್ಲೇ ಈ ದಾಳಿ ನಡೆದಿದೆ. ಕಳೆದ ವಾರ ಬಂದೂಕುದಾರಿಯೊಬ್ಬ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದ ಘಟನೆ ಟೆಕ್ಸಾಸ್‌ನಲ್ಲಿ ನಡೆದಿತ್ತು. ನ್ಯೂಯಾರ್ಕ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕು ಹಿಡಿದ ವ್ಯಕ್ತಿಯು 10 ಜನರನ್ನು ಬಲಿ ಪಡೆದಿದ್ದ. ಈ ಘಟನೆಗಳು ಬಂದೂಕು ನಿಯಂತ್ರಣದ ಕುರಿತು ಭಾರೀ ಚರ್ಚೆಯನ್ನು ಸೃಷ್ಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT