ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ ಬಸ್‌ ಅಪಘಾತ: 6 ಮಂದಿ ಸಾವು

Last Updated 12 ಮಾರ್ಚ್ 2023, 14:16 IST
ಅಕ್ಷರ ಗಾತ್ರ

ಕಠ್ಮಂಡು (ಪಿಟಿಐ): ನೇಪಾಳದ ಸಿಂಧುಲಿ ಜಿಲ್ಲೆಯಲ್ಲಿ ಭಾನುವಾರ ಬಸ್‌ವೊಂದು ಬೆಟ್ಟಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. 28 ಮಂದಿಗೆ ಗಾಯಗಳಾಗಿವೆ.

‘ಓಖಲ್‌ಧುಂಗಾದಿಂದ ಕಠ್ಮಂಡುಗೆ ಹೋಗುತ್ತಿದ್ದ ಬಸ್‌ನಲ್ಲಿ 34 ಮಂದಿ ‍ಪ್ರಯಾಣಿಸುತ್ತಿದ್ದರು. ಫಿಕ್ಕಲ್‌ ಗ್ರಾಮಾಂತರ ಪುರಸಭೆ–4ರ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ’ ಎಂದು ‘ದಿ ಕಠ್ಮಂಡು ಪೋಸ್ಟ್‌’ ವರದಿ ಮಾಡಿದೆ.

‘ಬಸ್‌ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಡಿಎಸ್‌ಪಿ ಚಿರಂಜೀವಿ ದಹಲ್‌ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT