ಹೊಸ ವರ್ಷಾಚರಣೆ: ಉಗಾಂಡದಲ್ಲಿ ಕಾಲ್ತುಳಿತ; 9 ಸಾವು

ಕಂಪಾಲಾ: ಪೂರ್ವ ಆಫ್ರಿಕಾ ದೇಶವಾದ ಉಗಾಂಡದಲ್ಲಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಒಂಬತ್ತು ಜನರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇಲ್ಲಿನ ಫ್ರೀಡಂ ಶಾಪಿಂಗ್ ಮಾಲ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಉಗಾಂಡ ಪೊಲೀಸರು ಹೇಳಿದ್ದಾರೆ.
. @Lukowoyesigyire "The Katwe Territorial Police are investigating an incident of rash and neglect that occurred at a New Year's Eve event at the Freedom City Mall Namasuba and resulted in the deaths of nine people, including several juveniles"
1/3— Uganda Police Force (@PoliceUg) January 1, 2023
ಮಾಲ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಜನರು ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ ಪರಿಣಾಮ ಮಕ್ಕಳು, ಮಹಿಳೆಯರು ಸೇರಿ 9 ಜನರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ 28 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಬಗ್ಗೆ ಉಗಾಂಡ ಪೊಲೀಸರು ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಮಿತಿ ರಚಿಸಿ ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಾಲ್ ಸಿಬ್ಬಂದಿಗಳ ನಿರ್ಲಕ್ಷವೇ ಈ ಘಟನೆಗೆ ಕಾರಣ ಎನ್ನಲಾಗಿದೆ.
ಮಾಲ್ ಒಳಗೆ ಪಟಾಕಿ ಪ್ರದರ್ಶನ ಮುಗಿದ ಬಳಿಕ ಕಾಲ್ತುಳಿತ ಸಂಭವಿಸಿತು ಎಂದು ಸ್ಥಳೀಯರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.