ಗುರುವಾರ , ಅಕ್ಟೋಬರ್ 29, 2020
21 °C

ಚೀನಾ ಮೇಲೆ ಹರಿಹಾಯ್ದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ: ಚೀನಾದ ದುರುದ್ದೇಶಪೂರಿತ ಚಟುವಟಿಕೆಗಳ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಮಂಗಳವಾರ ಕಿಡಿಕಾರಿದ್ದಾರೆ. 

ಟೋಕಿಯೊದಲ್ಲಿ ಆಯೋಜಿಸಿರುವ ಏಷ್ಯಾ ಪೆಸಿಫಿಕ್‌‌ ಮಿತ್ರರಾಷ್ಟ್ರಗಳ ಚತುಷ್ಕೋನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಭೆಯಲ್ಲಿ ಜಪಾನ್‌, ಆಸ್ಟ್ರೇಲಿಯಾ ಮತ್ತು ಭಾರತದ ವಿದೇಶಾಂಗ ಸಚಿವರೂ ಭಾಗವಹಿಸಿದ್ದಾರೆ.  

‘ಚತುಷ್ಕೋನ ಸಭೆಯ ಬಳಿಕ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ’ ಎಂದೂ ಪಾಂಪಿಯೊ ತಿಳಿಸಿದ್ದಾರೆ. 

‘ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಮರೀಸ್‌ ಪೈನ್‌ ಜೊತೆಗಿನ ಸಭೆಯ ವೇಳೆ ಪಾಂಪಿಯೊ ಅವರು ಚೀನಾದ ದುರುದ್ದೇಶಪೂರಿತ ಚಟುವಟಿಕೆಗಳ ಬಗ್ಗೆ ಚರ್ಚಿಸಿದ್ದಾರೆ’ ಎಂದು ಯುಎಸ್‌ ಸ್ಟೇಟ್‌ ಡಿಪಾರ್ಟ್‌ಮೆಂಟ್‌ನ ಅಧಿಕಾರಿಗಳು ಹೇಳಿದ್ದಾರೆ.     

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು