ಸೋಮವಾರ, ಆಗಸ್ಟ್ 8, 2022
24 °C

ಡೊಮಿನಿಕಾ: ಅನಾರೋಗ್ಯ ಕಾರಣ ಮೆಹುಲ್ ಚೋಕ್ಸಿ ಆಸ್ಪತ್ರೆ ವಾಸ ಮುಂದುವರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಜ್ರ ವ್ಯಾಪಾರಿ ಮೆಹುಲ್‌ ಚೋಕ್ಸಿ ಅವರನ್ನು ಪೊಲೀಸ್ ಕಸ್ಟಡಿಯಿಂದ ಜೈಲಿಗೆ ಸ್ಥಳಾಂತರಿಸುವಂತೆ ಡೊಮಿನಿಕಾದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿದೆ. ಆದರೆ ಸದ್ಯ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ಚೋಕ್ಸಿ ಅವರ ವಕೀಲ, ಭಾರತದಲ್ಲಿರುವ ವಿಜಯ್ ಅಗರ್‌ವಾಲ್ ತಿಳಿಸಿದ್ದಾರೆ.

ಅವರ ವೈದ್ಯಕೀಯ ಪ್ರಮಾಣಪತ್ರವನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಚೋಕ್ಸಿ ಮಾನಸಿಕ ಒತ್ತಡ ಮತ್ತು ಅಧಿಕ ರಕ್ತದೊತ್ತಡಕ್ಕೆ ‘ಡೊಮಿನಿಕಾ ಚೀನಾ ಫ್ರೆಂಡ್‌ಶಿಪ್ ಹಾಸ್ಪಿಟಲ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೊಮಿನಿಕಾಗೆ ಅಕ್ರಮ ಪ್ರವೇಶ ಪ್ರಕರಣಕ್ಕೆ ಸಂಬಂಧಿಸಿ ಚೋಕ್ಸಿ ವಿರುದ್ಧದ ವಿಚಾರಣೆಯನ್ನು ನ್ಯಾಯಾಲಯ ಈಗಾಗಲೇ ಜೂನ್ 25ಕ್ಕೆ ಮುಂದೂಡಿಕೆ ಮಾಡಿದೆ.

ಓದಿ: 

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಸುಮಾರು ₹13,500 ಕೋಟಿ ವಂಚಿಸಿದ ಆರೋಪ ಹೊತ್ತಿರುವ ಚೋಕ್ಸಿ, ಆಂಟಿಗುವಾ, ಬಾರ್ಬುಡಾಗೆ ಪರಾರಿಯಾಗಿ 2018ರಲ್ಲಿ ಅಲ್ಲಿನ ಪೌರತ್ವ ಪಡೆದಿದ್ದರು. ಮೇ 23ರಂದು ಅಲ್ಲಿಂದ ತಪ್ಪಿಸಿಕೊಂಡು ಡೊಮಿನಿಕಾಗೆ ಅಕ್ರಮ ಪ್ರವೇಶ ಪಡೆದ ಕಾರಣ ಪೊಲೀಸರು ಬಂಧಿಸಿದ್ದರು. ಚೋಕ್ಸಿಯನ್ನು ಭಾರತಕ್ಕೆ ಕರೆ ತರಲು ತನಿಖಾ ಸಂಸ್ಥೆಗಳು ಪ್ರಯತ್ನಿಸುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು