ಶನಿವಾರ, ಡಿಸೆಂಬರ್ 5, 2020
19 °C

ಡೊನಾಲ್ಡ್ ಟ್ರಂಪ್ ಸೋಲೊಪ್ಪಿಕೊಳ್ಳಬೇಕೆಂದು ಬಯಸಿದ ಮೆಲಾನಿಯಾ ಟ್ರಂಪ್

ಎಎನ್‌ಐ‌ Updated:

ಅಕ್ಷರ ಗಾತ್ರ : | |

Melania Trump

ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧದ ಸೋಲನ್ನು ಡೊನಾಲ್ಡ್ ಟ್ರಂಪ್ ಒಪ್ಪಿಕೊಳ್ಳಬೇಕು ಎನ್ನುವ ಅವರ ಆಪ್ತವಲಯದಲ್ಲಿ ಅವರ ಪತ್ನಿ ಮೆಲಾನಿಯಾ ಟ್ರಂಪ್ ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಬಗ್ಗೆ ಮೆಲಾನಿಯಾ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯೆ ನೀಡಿಲ್ಲ. ಖಾಸಗಿಯಾಗಿ ತಮ್ಮದೇ ಆದ ಅಭಿಪ್ರಾಯ ಹೊಂದಿದ್ದಾರೆ ಎಂದು ಸಿಎನ್‌ಎನ್‌ ಸುದ್ದಿವಾಹಿನಿ ವರದಿ ಮಾಡಿದೆ.

ಇದನ್ನೂ ಓದಿ: 

ಮೆಲಾನಿಯಾ ಅವರು ಕಳೆದ ತಿಂಗಳು ಟ್ರಂಪ್ ಗೆಲುವಿಗಾಗಿ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಜಾರೆಡ್ ಕುಶ್ನರ್ (ಟ್ರಂಪ್ ಅಳಿಯ) ಅವರು ಸೋಲೊಪ್ಪಿಕೊಳ್ಳುವಂತೆ ಈಗಾಗಲೇ ಟ್ರಂಪ್ ಬಳಿ ಮಾತುಕತೆ ನಡೆಸಿದ್ದಾರೆ ಎಂದೂ ಮೂಲಗಳು ಸಿಎನ್ಎನ್‌ಗೆ ತಿಳಿಸಿವೆ.

ಇದನ್ನೂ ಓದಿ: 

‘ಬೈಡನ್‌ ಅವರು ತಾನೇ ಮುಂದಿನ ಅಧ್ಯಕ್ಷ ಎಂದು ಸುಳ್ಳು ಘೋಷಣೆ ಮಾಡುತ್ತಿದ್ದಾರೆ’ ಎಂದು ಡೊನಾಲ್ಡ್‌ ಟ್ರಂಪ್ ಭಾನುವಾರ ಹೇಳಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು