ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಸಿಡ್ನಿ ನಂತರ ಮೆಲ್ಬರ್ನ್‌ನಲ್ಲೂ ಕೋವಿಡ್ ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, 1.2 ಕೋಟಿ ಜನರಿಗೆ ಮನೆ ಬಿಟ್ಟು ಹೊರಬರದಂತೆ ಆದೇಶ ಹೊರಡಿಸಲಾಗಿದೆ.
ಕೋವಿಡ್ ನಿಯಂತ್ರಣದಲ್ಲಿದ್ದ ಆಸ್ಟ್ರೇಲಿಯಾದಲ್ಲಿ ಕಳೆದ ತಿಂಗಳು 1,000ದಷ್ಟು ಸೋಂಕು ಪ್ರಕರಣಗಳು ಕಂಡುಬಂದಿದ್ದವು. ಅಲ್ಲದೆ ಕೋವಿಡ್-19ರ ಡೆಲ್ಟಾ ರೂಪಾಂತರ ತಳಿಯು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಇಂಡೋನೇಷ್ಯಾದಲ್ಲಿ ಫೈಜರ್ ತುರ್ತು ಬಳಕೆಗೆ ಅನುಮೋದನೆ
ವಿಕ್ಟೋರಿಯಾದಲ್ಲಿ 18 ಸೋಂಕು ಪ್ರಕರಣ ದೃಢಪಟ್ಟ ಬೆನ್ನಲ್ಲೇ ಲಾಕ್‌ಡೌನ್ ಘೋಷಿಸುವ ಕಠಿಣ ನಿರ್ಧಾರ ಕೈಗೊಂಡಿದ್ದೇವೆ ಎಂದು ಡ್ಯಾನ್ ಆಂಡ್ರೂಸ್ ತಿಳಿಸಿದ್ದಾರೆ.
ಹೆಚ್ಚು ಕಾಯದೇ ಈಗಲೇ ಲಾಕ್‌ಡೌನ್ ಹೇರುವುದು ಸೂಕ್ತ ಎಂದವರು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾದ ಅತಿ ದೊಡ್ಡ ನಗರ ಸಿಡ್ನಿಯಲ್ಲಿ ಲಾಕ್‌ಡೌನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕಳೆದ 24 ತಾಸಿನಲ್ಲಿ 65 ಹೊಸ ಪ್ರಕರಣಗಳು ದಾಖಲಾಗಿವೆ.
ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಲಾಕ್‌ಡೌನ್ ಮುಂದಿನ ಎರಡು ವಾರಗಳ ವರೆಗೂ ಮುಂದುವರಿಸುವ ಸಾಧ್ಯತೆಯಿದೆ.
ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವುದರಲ್ಲಿ ಆಸ್ಟ್ರೇಲಿಯಾ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದ್ದು, 'ಕೋವಿಡ್ ಶೂನ್ಯ ನೀತಿ'ಯನ್ನು ಅತ್ಯಂತ ಪರಿಣಾಮಕಾರಿಯಾಗಿ ಆಳವಡಿಸಿಕೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.