ಕರಾಚಿ: ಹಿಂದೂ ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಬಲವಂತವಾಗಿ ಮತಾಂತರಗೊಳಿಸಿ ವಿವಾಹ ಮಾಡುತ್ತಿರುವುದನ್ನು ಖಂಡಿಸಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು.
ಕರಾಚಿ ಪ್ರೆಸ್ ಕ್ಲಬ್‌ನ ಹೊರಗೆ ಮತ್ತು ಸಿಂಧ್ ಅಸೆಂಬ್ಲಿ ಕಟ್ಟಡದ ಪ್ರವೇಶದ್ವಾರದಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನು ಹಿಂದೂ ಸಂಘಟನೆಯಾದ ಪಾಕಿಸ್ತಾನ್ ದಾರಾವರ್ ಇತ್ತೆಹಾದ್ (ಪಿಡಿಐ) ಆಯೋಜಿಸಿತ್ತು.
‘ಸಿಂಧಿ ಹಿಂದೂಗಳು ಎದುರಿಸುತ್ತಿರುವ ಈ ಸಮಸ್ಯೆಯನ್ನು ನಾವು ಮುನ್ನೆಲೆಗೆ ತರಲು ಇಚ್ಚಿಸಿದ್ದೇವೆ. ಗ್ರಾಮೀಣ ಪ್ರದೇಶಗಳಲ್ಲಿ 12–13 ವರ್ಷದ ಯುವತಿಯರನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಲಾಗುತ್ತದೆ. ಬಳಿಕ ವಯಸ್ಸಾದ ಮುಸ್ಲಿಂ ಪುರುಷರೊಂದಿಗೆ ಮದುವೆ ಮಾಡಿಸಲಾಗುತ್ತಿದೆ’ ಪಿಡಿಐ ಸದಸ್ಯರೊಬ್ಬರು ಹೇಳಿದರು.
ಕೆಲವು ತಿಂಗಳಿಂದ ಈಚೆಗೆ ಸಿಂಧ್‌ನಲ್ಲಿ ಇಂತಹ ಪ್ರಕರಣಗಳು ಉಲ್ಬಣಗೊಂಡಿವೆ. ಹಿಂದೂ ಯುವತಿಯರು ಮತ್ತು ಮಹಿಳೆಯರ ಬಲವಂತದ ಮತಾಂತರ ಮತ್ತು ವಿವಾಹವನ್ನು ತಡೆಯಲು ಮಸೂದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸುವ ಭಿತ್ತಿಪತ್ರಗಳನ್ನು ಪ್ರತಿಭಟನಕಾರರು ಹಿಡಿದಿದ್ದರು.
ಈ ವರ್ಷದ ಜನವರಿಯಲ್ಲಿ 12 ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು, ಪಾಕಿಸ್ತಾನದಲ್ಲಿ 13 ವರ್ಷದ ಹುಡುಗಿಯರ ಅಪಹರಣ, ಬಲವಂತದ ಮತಾಂತರ ಮತ್ತು ವಿವಾಹ ಮಾಡಿಸುವಂತಹ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದ್ದರು. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ವರದಿ ಪ್ರಕಾರ, ಪ್ರತಿ ವರ್ಷ 1000 ಯುವತಿಯರನ್ನು ಒತ್ತಾಯಪೂರ್ವಕವಾಗಿ ಮತಾಂತರ ಮಾಡಲಾಗುತ್ತಿದೆ ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.