ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀತಲ ಸಮರ ಕೊನೆಗೊಳಿಸಿದ್ದ ರಷ್ಯಾದ ಮಾಜಿ ಅಧ್ಯಕ್ಷ ಗೊರ್ಬಚೆವ್ ನಿಧನ

Last Updated 31 ಆಗಸ್ಟ್ 2022, 2:27 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾದ ಮಾಜಿ ಅಧ್ಯಕ್ಷ, ಸೋವಿಯತ್ ಒಕ್ಕೂಟದ (ಯುಎಸ್‌ಎಸ್‌ಆರ್) ಕೊನೆಯ ನಾಯಕ ಮಿಖಾಯಿಲ್ ಗೊರ್ಬಚೆವ್ ಮಂಗಳವಾರ ನಿಧನರಾದರು.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಶೀತಲ ಸಮರವನ್ನು ರಕ್ತಪಾತವಿಲ್ಲದೆ ಕೊನೆಗೊಳಿಸಿದ್ದ ಖ್ಯಾತಿ ಅವರಿಗೆ ಸಲ್ಲುತ್ತದೆ. ಆದರೂ ಸೋವಿಯತ್ ಒಕ್ಕೂಟದ ಪತನವನ್ನು ತಡೆಯುವಲ್ಲಿ ವಿಫಲರಾಗಿದ್ದರು.

ರಷ್ಯಾ ಸೋವಿಯತ್ ಒಕ್ಕೂಟದ ಕೊನೆಯ ಅಧ್ಯಕ್ಷರಾಗಿದ್ದ ಗೊರ್ಬಚೆವ್, ಯುನೈಟೆಡ್ ಸ್ಟೇಟ್ಸ್ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳೊಂದಿಗೆ ಶಸ್ತ್ರಾಸ್ತ್ರ ಕಡಿತದ ಒಪ್ಪಂದ ಮಾಡಿಕೊಂಡಿದ್ದರು.

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಗೊರ್ಬಚೆವ್ ನಿಧನರಾಗಿದ್ದಾರೆ ಎಂದು ರಷ್ಯಾದಸೆಂಟ್ರಲ್ ಕ್ಲಿನಿಕಲ್ ಆಸ್ಪತ್ರೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT