ಮಂಗಳವಾರ, ಜನವರಿ 26, 2021
28 °C

ಸಿರಿಯಾ: ಬಸ್‌ಗಳ ಮೇಲೆ ಉಗ್ರರ ದಾಳಿ; 9 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಡಮಾಸ್ಕಸ್: ಮಧ್ಯ ಸಿರಿಯಾದ ಹೆದ್ದಾರಿಯಲ್ಲಿ ಮೂರು ಬಸ್‌ಗಳ ಮೇಲೆ ಉಗ್ರರು ಭಾನುವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಇದರಲ್ಲಿ 13 ವರ್ಷದ ಬಾಲಕಿ ಸೇರಿದಂತೆ 9 ಮಂದಿ ಮೃತಪಟ್ಟಿದ್ದು, ನಾಲ್ಕು ಮಂದಿಗೆ ಗಾಯಗಳಾಗಿವೆ.

ಸರ್ಕಾರಿ ನಿಯಂತ್ರಿತ ಪ್ರದೇಶಗಳ ನಡುವೆ ಬಸ್‌ಗಳನ್ನು ಗುರಿಯಾಗಿಸಿಕೊಂಡು ದಾಳಿಯನ್ನು ನಡೆಸಲಾಗುತ್ತಿದೆ. ಈ ವಾರದಲ್ಲಿ ಎರಡನೇ ಬಾರಿ ಬಸ್‌ಗಳ ಮೇಲೆ ದಾಳಿ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದ ಬುಧವಾರವೂ ಬಸ್‌ಗಳ ಮೇಲೆ ದಾಳಿ ನಡೆದಿತ್ತು. ಅಂದು 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು