ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಿಗಳಿಗೆ ಕೋವಿಡ್‌: ವಿಶ್ವ ಸುಂದರಿ ಅಂತಿಮ ಸುತ್ತಿನ ಸ್ಪರ್ಧೆ ಮುಂದೂಡಿಕೆ

Last Updated 17 ಡಿಸೆಂಬರ್ 2021, 13:34 IST
ಅಕ್ಷರ ಗಾತ್ರ

ಮುಂಬೈ/ಸ್ಯಾನ್ ಜುವಾನ್‌: 2021ರ ವಿಶ್ವ ಸುಂದರಿ ಸ್ಪರ್ಧೆಯ ಭಾರತದ ಸ್ಪರ್ಧಿ ಮಾನಸ ವಾರಾಣಸಿ ಸೇರಿದಂತೆ ಹಲವರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ಅಂತಿಮ ಸುತ್ತಿನ ಸ್ಪರ್ಧೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘಟಕರು ಹೇಳಿದ್ದಾರೆ.

ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಲ್ಲಿ ಡಿಸೆಂಬರ್‌ 16ರಂದು ನಡೆಯಬೇಕಿದ್ದ ಅಂತಿಮ ಸುತ್ತಿನ ಸ್ಪರ್ಧೆಯು 90 ದಿನಗಳ ನಂತರ ನಡೆಯಲಿದೆ ಎಂದು ಸಂಘಟಕರು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.

ಹೆಚ್ಚು ಕೋವಿಡ್‌ ಪ್ರಕರಣಗಳು ದೃಢಪಟ್ಟಿರುವ ಕಾರಣ ತಜ್ಞರ ಸಲಹೆಯಂತೆ ಸ್ಪರ್ಧೆಯನ್ನು ಮುಂದೂಡಲಾಗಿದೆ. ಸ್ಪರ್ಧಿಗಳು ಮತ್ತು ಸಿಬ್ಬಂದಿಗೆ ಕೋವಿಡ್‌ ಇಲ್ಲ ಎಂಬುದು ದೃಢಪಟ್ಟ ಬಳಿಕ ಅವರನ್ನು ಅವರ ದೇಶಗಳಿಗೆ ಕಳುಹಿಸಲಾಗುವುದು ಎಂದೂ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT