ಮಂಗಳವಾರ, ಜೂನ್ 28, 2022
28 °C

ಭಾರತ–ಚೀನಾ ನಡುವಿನ ಬಿಕ್ಕಟ್ಟು ಬಗೆಹರಿಸಲು ಮೋದಿ –ಷಿ ಸಮರ್ಥರು: ಪುಟಿನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸೇಂಟ್‌ ಪೀಟರ್ಸ್‌ಬರ್ಗ್, ರಷ್ಯಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಜವಾಬ್ದಾರಿಯುತ ನಾಯಕರಾಗಿದ್ದಾರೆ. ಉಭಯ ದೇಶಗಳ ನಡುವಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನೂ ಅವರು ಹೊಂದಿದ್ದಾರೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ಶನಿವಾರ ಹೇಳಿದರು.

ಭಾರತ ಮತ್ತು ಚೀನಾ ತಮ್ಮ ನಡುವಿನ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ನಡೆಸುವ ಪ್ರಯತ್ನದಲ್ಲಿ ಇತರ ಪ್ರಾದೇಶಿಕ ಶಕ್ತಿಗಳು ಹಸ್ತಕ್ಷೇಪ ಮಾಡಬಾರದು ಎಂದು ಅವರು ಎಚ್ಚರಿಸಿದರು.

ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಭಾರತ ಮತ್ತು ಚೀನಾ ಸಂಬಂಧಗಳ ಕುರಿತು ತಮ್ಮ ನಿಲುವುಗಳನ್ನು ಹಂಚಿಕೊಂಡರು.

ಭಾರತ, ಅಮೆರಿಕ, ಜಪಾನ್‌ ಹಾಗೂ ಆಸ್ಟ್ರೇಲಿಯಾ ರಚಿಸಿಕೊಂಡಿರುವ ‘ಕ್ವಾಡ್‌’ ಬಗ್ಗೆ ಇತ್ತೀಚೆಗೆ ಅವರು ಬಹಿರಂಗವಾಗಿಯೇ ಟೀಕಿಸಿದ್ದರು. ಈ ಬಗ್ಗೆಯೂ ಪ್ರಸ್ತಾಪಿಸಿದ ಅವರು, ‘ಯಾವುದೇ ದೇಶ ಮತ್ತೊಂದು ದೇಶದೊಂದಿಗೆ ಹೇಗೆ ಸಂಬಂಧ ವೃದ್ಧಿಸಿಕೊಳ್ಳಬೇಕು ಎಂಬ ಬಗ್ಗೆ ರಷ್ಯಾ ಸಲಹೆ ನೀಡಲಾಗದು’ ಎಂದರು.

‘ಆದರೆ, ಯಾವುದೇ ದೇಶಗಳ ಮೈತ್ರಿ ಮತ್ತೊಂದು ರಾಷ್ಟ್ರವನ್ನು ವಿರೋಧಿಸುವ ತಂತ್ರವಾಗಿ ಇರಬಾರದು’ ಎಂದು ಅವರು ‘ಕ್ವಾಡ್‌’ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

‘ಭಾರತ ಹಾಗೂ ಚೀನಾದೊಂದಿಗೆ ರಷ್ಯಾ ಉತ್ತಮ ಬಾಂಧವ್ಯ ಹೊಂದಿದೆ. ಈ ವಿಷಯದಲ್ಲಿ ಯಾವುದೇ ವಿರೋಧಾಭಾಸ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು